ಹಾವೇರಿ : ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಕಾರಣಕ್ಕೆ ಮಲ್ಲಿಕಾರ್ಜುನ ಹಾವೇರಿಯನ್ನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಸೂಚನೆಯಂತೆ ಹಾವೇರಿ ಜಿಲ್ಲಾಧ್ಯಕ್ಷ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮಲ್ಲಿಕಾರ್ಜುನ ಹಾವೇರಿ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದರು. ಧಾರವಾಡ ದ್ವಿಸದಸ್ಯ ಸ್ಥಾನಕ್ಕೆ ನಿಂತಿದ್ದರು. ಕಾರಣ ಪಕ್ಷದಲ್ಲಿದ್ದುಕೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಶಿಸ್ತು ಉಲ್ಲಂಘನೆ ಮಾಡಿದ್ದಾರೆಂದು ಉಚ್ಛಾಟನೆ ಮಾಡಲಾಗಿದೆ.
ಮಲ್ಲಿಕಾರ್ಜುನ್ ಹಾವೇರಿ ಬಿಜೆಪಿಯ ಅಧಿಕೃತ ಸದಸ್ಯತ್ವ ಹೊಂದಿದ್ದಾರೆ. ಹೀಗಿದ್ದರು ಬಂಡಾಯವೆದ್ದು, ತಮ್ಮದೇ ಪಕ್ಷದ ಅಭ್ಯರ್ಥಿ ಪ್ರದೀಪ ಶೆಟ್ಟರ ವಿರುದ್ಧವೇ ನಿಂತಿದ್ದರು. ಹೀಗಾಗಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿ, ಆದೇಶ ಹೊರಡಿಸಿದ್ದಾರೆ. ಇನ್ನು ಮಲ್ಲಿಕಾರ್ಜುನ ಹಾವೇರಿ ಸದ್ಯ ಎಪಿಎಂಸಿ ಅಧ್ಯಕ್ಷನಾಗಿದ್ದಾರೆ.