Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | 77678 ರೈತ ಫಲಾನುಭವಿಗಳಿಗೆ 52 ಕೋಟಿ ಬೆಳೆ ಹಾನಿ ಪರಿಹಾರ

Facebook
Twitter
Telegram
WhatsApp

ಚಿತ್ರದುರ್ಗ, (ಡಿಸೆಂಬರ್17) : ಜಿಲ್ಲೆಯಲ್ಲಿ 2021-22ನೇ ಸಾಲಿನ ನವೆಂಬರ್ ಮಾಹೆಯಲ್ಲಿ ಬಿದ್ದಂತಹ ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ ಆಗಿದ್ದು, ಬೆಳೆ ಹಾನಿಯ ಕುರಿತು ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸಮೀಕ್ಷೆ ಕಾರ್ಯಯನ್ನು ಮುಗಿದಿದ್ದು ಜಿಲ್ಲೆಯ ರೈತರಿಗೆ 52 ಕೋಟಿಯಷ್ಟು ಹಣ ಅವರ ಖಾತೆಗೆ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ   ಎಸ್.ಮನ್ನಿಕೇರಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಶೇಂಗಾ ಬೆಳೆಯಲ್ಲಿ ಒಟ್ಟು 56119 ಹೆಕ್ಟೇರ್, ರಾಗಿ ಬೆಳೆಯಲ್ಲಿ 19030 ಹೆಕ್ಟೇರ್, ಕಡಲೆ ಬೆಳೆಯಲ್ಲಿ 15307 ಹೆಕ್ಟೇರ್, ಮೆಕ್ಕೆಜೋಳದಲ್ಲಿ 1979 ಹೆಕ್ಟೇರ್ ಹಾಗೂ ಇತರೆ ಬೆಳೆಗಳಲ್ಲಿ 870.40 ಹೆಕ್ಟೇರ್‍ಗಳಂತೆ ಒಟ್ಟು 93305.40 ಹೆಕ್ಟೇರ್‍ಗಳಷ್ಟು ಬೆಳೆಹಾನಿಯಾಗಿರುವುದು ವರದಿಯಾಗಿದೆ.

ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 02 ರಿಂದ 16 ರವರೆಗೆ ಒಟ್ಟು 13 ಹಂತಗಳಲ್ಲಿ ಚಿತ್ರದುರ್ಗ ಜಿಲ್ಲೆಯ 77678 ರೈತ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮುಖಾಂತರ ಒಟ್ಟು ಮೊತ್ತ ರೂ. 520614275 ಹಣ ಬಿಡುಗಡೆಯಾಗಿರುತ್ತದೆ.
ಉಳಿದ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವುದಕ್ಕಾಗಿ ವಿಧಾನ ಪರಿಷತ್‍ನಲ್ಲಿ ಶಿಕ್ಷಕರ ಪರವಾಗಿ ಹೋರಾಟ : ಲೋಕೇಶ್ ತಾಳಿಕಟ್ಟೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ,ಮೇ.08 : ಶಿಕ್ಷಕರುಗಳಿಗೆ ಓಪಿಎಸ್ ಅಥವಾ ಪಿಂಚಣಿಯನ್ನು ಕೊಡಿಸುವುದು. ಕಾಲ್ಪನಿಕ ವೇತನವನ್ನು ಕೊಡಿಸುವುದು. ಬಡ್ತಿ ಪಡೆದ ಶಿಕ್ಷಕರಿಗೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : 3-4 ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣು..!

ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಹಾಸನದ ಹಾದಿ-ಬೀದಿಯಲ್ಲಿ ಸಿಕ್ಕಿವೆ. ರಾಜ್ಯದೆಲ್ಲೆಡೆ ಈ ವಿಡಿಯೋಗಳಲ್ಲಿರುವ ಮಹಿಳೆಯರ ದರ್ಶನವಾಗಿದೆ. ಇದರಿಂದ ಎಷ್ಟೋ ಹೆಣ್ಣುಮಕ್ಕಳ ಜೀವನ ಅತಂತ್ರ ಸ್ಥಿತಿಗೆ ತಲುಪಿದೆ. ಇದೀಗ ನಾಗಮಂಗಲದ

ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ : ಚಿತ್ರದುರ್ಗದಲ್ಲಿ ಜೆಡಿಎಸ್ ಆಗ್ರಹ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಸುದ್ದಿಒನ್ ನ್ಯೂಸ್‌, suddione, suddione news, chitradurga, ಚಿತ್ರದುರ್ಗ,ಬೆಂಗಳೂರು, bengaluru,   ಸುದ್ದಿಒನ್, ಚಿತ್ರದುರ್ಗ,ಮೇ.08 : ಪೆನ್

error: Content is protected !!