ಬೆಂಗಳೂರು; ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆ ಜೋರಾಗಿದೆ. ಇಂದು ಸಂಜೆಯಿಂದಾನೇ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನ ಸುತ್ತಮುತ್ತ ಸಾಕಷ್ಡುಮಳೆಯಾಗಿದೆ. ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ ಸೇರಿದಂತೆ ಚಿಕ್ಕಮಗಳೂರು ಭಾಗದಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗುವ ಸೂಚನೆಯನ್ನು ನೀಡಿದೆ. ವಾಯುವ್ಯ ರಾಜಸ್ಥಾನದ ಮೇಲಿರುವ ಮೇಲ್ಮೈ ಸುಳಿಗಾಳಿಯಿಂದ ಉತ್ತರ ಕೇರಳದವರೆಗೆ ಒಂದು ರೇಖೆ ಇದೆ. ಇದು ಆಗ್ನೇಯ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ, ಒಳ ಕರ್ನಾಟಕದ ಮೂಲಕ ಹಾದು ಹೋಗುತ್ತದೆ.
ಮುಂದಿನ ಆರು ದಿನಗಳಲ್ಲಿ ದಜ್ಷಿಣ ಕನ್ನಡ ಜಿಲ್ಲೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಮತ್ತು ಕೊಪ್ಪಳ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಹಾಗೇ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಉಡುಪಿ ಮತ್ತು ದಕ್ಷಿಣ ಕನ್ನಡ, ಹಾವೇರಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ತಣ್ಣನೆಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮಳೆಯು ಜೋರಾಗಿ ಬರುವ ಸಾಧ್ಯತೆ ಇದೆ.


