Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐಸಿಎಸ್‌ಸಿ ಫಲಿತಾಂಶ : ಚಿತ್ರದುರ್ಗ ಮತ್ತು ದಾವಣಗೆರೆ ಜೋನಲ್ ವಿಭಾಗದಲ್ಲಿ ಎಸ್. ಆರ್. ಎಸ್. ಹೆರಿಟೇಜ್ ಶಾಲೆ ಪ್ರಥಮಸ್ಥಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 30 : ನಗರದ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು 2024-25 ರ ನೇ ಸಾಲಿನ ಚೊಚ್ಚಲ 10ನೇ ತರಗತಿಯ ICSE ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದಾರೆ.

ಐಸಿಎಸ್‌ಸಿ ಮಂಡಳಿಯು ಫಲಿತಾಂಶ ಪ್ರಕಟಿಸಿದ್ದು,
ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಿಂದ ( ಜೋನಲ್ ವಿಭಾಗದಲ್ಲಿ) ಹಾಗೂ ಜಿಲ್ಲೆಗೆ ಪ್ರಪ್ರಥಮ ಸ್ಥಾನವನ್ನು ಮೂಡಿಗೇರಿಸಿಕೊಂಡಿದೆ. ಶಾಲೆಯು ಶೇಕಡಾ 100% ಫಲಿತಾಂಶ ಪಡೆದು ಶಾಲೆಯ ಹಿರಿಮೆ ಹೆಚ್ಚಾಗಿದೆ.

ಆರ್ಯನ್ ವೀರ್ ಶೇ. 98% ಫಲಿತಾಂಶದೊಂದಿಗೆ ಝೋನಲ್ ಮಟ್ಟದಲ್ಲಿ ಹಾಗೂ ಜಿಲ್ಲೆಗೆ ಮತ್ತು ಶಾಲೆಗೆ ಪ್ರಪ್ರಥಮ ಸ್ಥಾನ ಪಡೆದಿದ್ದಾರೆ. ನಂತರದಲ್ಲಿ ಜೀವನ್ ಸಿ ಗೌಡ ಶೇ. 97% ಫಲಿತಾಂಶದೊಂದಿಗೆ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಈ ಮೂಲಕ ಶಾಲೆಯ ಹೆಸರನ್ನು ಝೋನಲ್ ಹಾಗೂ ಜಿಲ್ಲಾಮಟ್ಟದಲ್ಲಿ ಇತಿಹಾಸ ದಾಖಲಿಸಿದ್ದಾರೆ. ಒಟ್ಟಾರೆ 16 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಎಲ್ಲಾ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ, 9 ವಿದ್ಯಾರ್ಥಿಗಳು ಶೇ. 90 ರಷ್ಟು ಅಂಕಗಳನ್ನು ಗಳಿಸಿರುತ್ತಾರೆ. ಈ ಮೂಲಕ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯು ತನ್ನ ಮೊದಲ ಪ್ರಯತ್ನದಲ್ಲಿಯೇ ಶೇ. 100ರಷ್ಟು ಫಲಿತಾಂಶ ಪಡೆದುಕೊಳ್ಳುತ್ತಿರುವುದು ವಿಶೇಷ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಯನ್ನು ಕುರಿತು ಎಸ್ ಆರ್ ಎಸ್ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ,ಉಪಾಧ್ಯಕ್ಷರಾದ ಅಮೋಘ್ ಬಿ.ಎಲ್, ಆಡಳಿತಾಧಿಕಾರಿಗಳು ಡಾ. ರವಿ ಟಿ ಎಸ್, ಪ್ರಾಂಶುಪಾಲರಾದ ಅರ್ಪಿತ ಎಂ ಎಸ್ ಹಾಗೂ ಬೋಧಕ ಸಿಬ್ಬಂದಿವರ್ಗದವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment