ಸುದ್ದಿಒನ್, ಚಿತ್ರದುರ್ಗ, ಮೇ. 01 : ನಗರದ ಹೊರವಲಯದ ಸೀಬಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಮೃತರನ್ನು ಅರ್ಜುನ(28 ವರ್ಷ), ಶ್ರೀಧರ್ (30 ವರ್ಷ) ಮತ್ತು ಮತ್ತು ಶರವಣ(30 ವರ್ಷ) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದೆ. ಇವರೆಲ್ಲರೂ ತಮಿಳುನಾಡಿನ ಕೃಷ್ಣಗಿರಿ ಮೂಲದವರು. ಪ್ರವಾಸಕ್ಕೆಂದು ಗೋವಾಕ್ಕೆ ತೆರಳುತ್ತಿದ್ದಾಗ ಸೀಬಾರ ಬಳಿ ಟೈರ್ ಸ್ಫೋಟಗೊಂಡು ಕಾರು ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ಈ ದುರ್ಘಟನೆ ನಡೆದಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















