ಮೈಸೂರು; ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಘಟನೆಯೊಂದು ನಡೆದಿತ್ತು. ಕಾರ್ಯಕ್ರಮದಲ್ಲಿ ವ್ಯವಸ್ಥೆ ಸರಿಯಾಗಿ ಇಲ್ಲದ ಕಾರಣ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಯನ್ನ ಜೋರಾಗಿ ಕೇಳಿದ ಪ್ರಸಂಗ ನಡೆದಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಈ ಸಂಬಂಧ ವಿರೋಧ ಪಕ್ಷದ ನಾಯಕರು ವಾಗ್ದಾಳಿಯನ್ನು ನಡೆಸಿದ್ದರು. ಇದೀಗ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಆ ಘಟನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಆ ಸಮಯದಲ್ಲಿ ರೇಗಿದ್ದನ್ನು ಸಮರ್ಥಿಸಿಕೊಂಡ ಯತೀಂದ್ರ ಅವರು, ಅದು ಕಾಂಗ್ರೆಸ್ ಕಾರ್ಯಕ್ರಮವಾಗಿತ್ತು. ಬಿಜೆಪಿ ನಾಯಕರು ಹೇಗೆ ನುಸುಳಿದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ವರನ್ನು ಕೇಳಿ, ಕೋಪದಿಂದ ಕೈ ಎತ್ತಿದ್ದು ನಿಜ. ಆದರೆ ನಮ್ನ ತಂದೆಯವರು ಯಾವತ್ತಿಗೂ ಅಧಿಕಾರಿಗಳ ವಿರುದ್ಧ ಕೈ ಎತ್ತಿಲ್ಲ ಎಂದಿದ್ದಾರೆ.
ಅಲ್ಲಿ ಕರ್ತವ್ಯ ಲೋಪವಾಗಿದೆ. ಹೀಗಾಗಿ ಅದನ್ನ ಪ್ರಶ್ನೆ ಮಾಡುವಂತ ಸಂದರ್ಭದಲ್ಲಿ ಸಿಎಂ ಕೇಳಿದ್ದಾರೆ. ಆದರೆ ಯಾವತ್ತು ಕೂಡ ಅವರು ಯಾವ ಅಧಿಕಾರಿಯ ಜೊತೆಗೂ ಆ ರೀತಿ ನಡೆದುಕೊಳ್ಳುವುದಿಲ್ಲ ಎಂದೇ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಯ ಮೇಲೆ ಕೈ ಮಾಡಲು ಹೋದ ಘಟನೆಯನ್ನ ಬಿಜೆಪಿ ನಾಯಕರು ಖಂಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. ಆದರೆ ಬಿಜೆಪಿಯವರು ಏನು ಬೇಕಾದವರು ಹೇಳಿಕೊಳ್ಳಲಿ. ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಹೇಳಬೇಕಾದದ್ದನ್ನ ಹೇಳಿ ಆಗಿದೆ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಾನು ರಾಜೀನಾಮೆ ನೀಡಲ್ಲ ಅಂತಾನೇ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















