Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೊಗರಿ ಬೆಳೆ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್ ; ಏನದು..?

---Advertisement---

ಬೆಂಗಳೂರು; ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಕ್ಕರೆ ಅದಕ್ಕಿಂತ ಮತ್ತೊಂದು ಖುಷಿ ಇಲ್ಲ. ಇದೀಗ ತೊಗರಿ ಬೆಳೆ ಬೆಳೆಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಬೆಂಬಲ‌ ಬೆಲೆಯೊಂದಿಗೆ ತೊಗರಿ ಬೆಳೆ ಖರೀದಿಯ ಅವಧಿಯನ್ನ ವಿಸ್ತರಣೆ ಮಾಡಲಾಗಿದೆ. ಮೇ ತಿಂಗಳ ಅಂತ್ಯದವರೆಗೂ ಖರೀದಿಯನ್ನು ವಿಸ್ತರಣೆ ಮಾಡಿದೆ.

ಬೆಂಬಲ ಬೆಲೆಯಲ್ಲಿ ತೊಗರಿ ಬೆಳೆ ಖರೀದಿಗೆ ಮೇ 1ನೇ ತಾರೀಖು ಕೊನೆಯಾಗಿತ್ತು. ಆದರೆ ಸರಿಯಾದ ಪ್ರಮಾಣದಲ್ಲಿ ಖರೀದಿ ಆಗದೆ ಇದ್ದ ಕಾರಣಕ್ಕೆ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಹೀಗಾಗಿ ಈ ಒಂದು ತಿಂಗಳು ವಿಸ್ತರಣೆಯನ್ನು ಮಾಡಲಾಗಿದೆ. ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಹೆ ಅನುಮತಿ ನೀಡಿದ್ದು, ಇದುವರೆಗೂ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ. ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿಯನ್ನು ರೈತರು ನೊಂದಣಿ ಮಾಡಿಸಿಕೊಂಡಿದ್ದಾರೆ. ಇನ್ನು ಸುಮಾರು 93 ಸಾವಿರ ಮೆಟ್ರಿಕ್ ಟನ್ ಖರೀದಿ ಮಾಡಬೇಕಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ಪ್ರತಿ ಟನ್ ಗೆ 7,550 ರೂಪಾಯಿ ನಿಗದಿಪಡಿಸಿದೆ. ಈ ಬೆಲೆ ಕಡಿಮೆಯಾಗಿದೆ, ಹೆಚ್ಚಳ ಮಾಡಬೇಕು ಅಂತ ರೈತರು ಕೂಡ ಬೇಡಿಕೆ ಇಟ್ಟಿದ್ದರು. ಈ ಬೇಡಿಕೆಯನ್ನ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದ್ದು, ಬಳಿಕ ಪದರತಿ ಕ್ವಿಂಟಾಲ್ ಗೂ 450 ಪ್ರೋತ್ಸಾಹ ಧನವನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ ಪ್ರತಿ ಕ್ವಿಂಟಾಲ್ ಗೆ 8 ಸಾವಿರ ಕೊಟ್ಟು ಖರೀದಿ ಮಾಡಲಾಗುತ್ತಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment