Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕನ್ನಡ ನಾಡು, ನುಡಿ, ಜಲ ರಕ್ಷಣೆಗೆ ಹೋರಾಡುವುದೇ ನಮ್ಮ ಧ್ಯೇಯ : ಪ್ರದೀಪ್ ಕುಮಾರ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ. 04 : ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡುವುದು ನಮ್ಮ ಧ್ಯೇಯವಾಗಿದೆ ಎಂದು ನವ ಕ್ರಾಂತಿ ರಕ್ಷಣೆ ವೇದಿಕೆಯ ರಾಜ್ಯ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನವ ಕ್ರಾಂತಿ ರಕ್ಷಣೆ ವೇದಿಕೆಯ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜಾತಿ ಬೇಧವಿಲ್ಲದೆ ಸಮಾನತೆಗೋಸ್ಕರ ಹಾಗೂ ಶಿಕ್ಷಣ ಅಭಿವೃದ್ಧಿಗಾಗಿ ಹೋರಾಡಿ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರದಂತೆ ನೋಡಿಕೊಳ್ಳುವುದು ಪಕ್ಷ ಭೇದ ಮರೆತು ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡಿ ಎಂದು ಜಿಲ್ಲಾ ಸಂಘಟನೆಗೆ ಕರೆಕೊಟ್ಟರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾಗಿ ಮೋಹನ್ ಸಿ.ಆರ್. ರವರನ್ನು ಆಯ್ಕೆ ಮಾಡಲಾಯಿತು. ಜೊತೆಗೆ ಶ್ರೀನಿವಾಸ ಯಾದವ್ ಬಸವರಾಜ್, ಆಕಾಶ್,ವಿನಯ್ ಕುಮಾರ್ ಆರ್, ನವೀನ್ ಕುಮಾರ್, ಜಗದೀಶ್ ಕೆ, ಸಿದ್ದೇಶ್ ಕೆ ಧನಂಜಯ್ ಕುಮಾರ್ ಕೆ, ಗೋಪಿ ,ವೀರೇಶ, ರವೀಂದ್ರನಾಥ್ ಧರ್ಮರಾಜ್, ಸಂಕಣ್ಣ, ರವರನ್ನು ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನಾಗಿ ಜಿಲ್ಲಾ ಘಟಕಕ್ಕೆ ಆಯ್ಕೆ ಮಾಡಲಾಯಿತು.

ಈ ಸಭೆಯಲ್ಲಿ ನವ ಕ್ರಾಂತಿ ರಕ್ಷಣೆ ವೇದಿಕೆಯ ಉಪಾಧ್ಯಕ್ಷರು ಬಾಗೋಡಿ ಸ್ವಾಮಿ, ಹನುಮಂತರಾಯ ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ ಜಿಲ್ಲಾ ಗೌರವ ಅಧ್ಯಕ್ಷಮಲ್ಲೇಗೌಡ್ರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...