ಬೆಂಗಳೂರು; ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮಳೆಯ ಪ್ರಭಾವ ಜೋರಾಗಿದೆ. ರಾಜ್ಯದ ಕೆಲವೆಡೆ ಭಾನುವಾರ ಒಂದಿನ ಬಿಡುವು ನೀಡಿದ್ದು, ನಾಳೆಯಿಂದ ಮೂರು ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದ 16 ರಾಜ್ಯಗಳಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆ ಶುರುವಾಗಿದೆ.
ದಕ್ಷಿಣ ಕನ್ನಡ, ಬೀದರ್, ಯಾದಗಿರಿ, ಬೀದರ್, ಕಲಬುರಗಿ, ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 7ರಿಂದ ಮೇ 10ರವರೆಗೂ ರಾಜ್ಯಾದ್ಯಂತ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಈಗಾಗಲೇ ಕಳೆದ ಎರಡ್ಮೂರು ದಿನದಿಂದ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಇದೆ. ಇಂದಿನಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸ್ಪಷ್ಟನೆ ನೀಡಿದೆ. ಅದರಲ್ಲೂ ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಹೀಗಾಗಿ ಬೆಂಗಳೂರಿನ ಜನರಿಗೆ ಎಚ್ಚರಿಕೆಯಿಂದ ಇರಬೇಕು ಎಂದು ಹವಮಾನ ಇಲಾಖೆ ಕೂಡ ಸೂಚನೆ ನೀಡಿದೆ.

ರಾಜ್ಯಾದ್ಯಂತ ಜೋರು ಮಳೆ ಮುಂದುವರೆಯಲಿದ್ದು, ಜನ ಕೂಡ ಎಚ್ಚರಿಕೆಯಿಂದ ಇರಬೇಕಾಗಿದೆ. ಹೊರಗೆ ಹೋಗುವವರು ಕೂಡ ಎಚ್ಚರಿಕೆಯಿಂದ ಇರಬೇಕು. ಹೊರಗೆ ಹೋಗುವುದಕ್ಕೂ ಮುನ್ನ ಒಂದಷ್ಟು ಮುಂಜಾಗ್ರತ ಕ್ರಮ ತೆಗೆದುಕೊಳ್ಳಿ. ಕೊಡೆ, ರೇನ್ ಕೋಟ್ ಗಳನ್ನ ಜೊತೆಗೆ ಇಟ್ಟುಕೊಳ್ಳಿ. ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














