ಬೆಂಗಳೂರು; ಒಳಮೀಸಲಾತಿ ವಿಚಾರ ಬಾರೀ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಅವರು ಒಳ ಮೀಸಲಾತಿ ಸಮೀಕ್ಷೆಗೆ ಒಪ್ಪಿಗೆ ನೀಡಿದೆ. ಇದೀಗ ಈ ಸಮೀಕ್ಷೆ ನಡೆಸುವುದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಮಾತನಾಡಿದ್ದಾರೆ.
ನಾಗಮೋಹನ್ ದಾಸ್ ಸಮೀಕ್ಷೆಗೆ ಸುಮಾರು ನೂರು ಕೋಟಿ ಹಣ ಖರ್ಚಾಗಲಿದೆ ಎಂದಿದ್ದಾರೆ. ರಾಷ್ಟ್ರೀಯ ಸಮಿತಿಯಲ್ಲೂ ಸ್ಪಷ್ಟ ಮಾಹಿತಿ ಇಲ್ಲ. ಕಾಂತರಾಜು ವರದಿಯಲ್ಲೂ ಮಾಹಿತಿ ಇಲ್ಲ. ಹೀಗಾಗಿ ಐತಿಹಾಸಿಕ ತೀರ್ಮಾನ ಮಾಡಲಾಗಿದೆ. ದುರುಪಯೋಗ ಆಗಬಾರದು, ಸುಳ್ಳು ಹೇಳಬಾರದು. ಎಡಗೈ, ಬಲಗೈ ಇಬ್ಬರು ಎಕೆ. ಎಡಿ ಅಂತ ಬರೆದುಕೊಳ್ಳುತ್ತಾರೆ. ಎಸ್ಸಿ ಗುಂಪಿನಲ್ಲಿ ಎಷ್ಟು ಜನ ಇದ್ದಾರೆ ಅನ್ನೋದು ಗೊತ್ತಾಗಬೇಕು. ಅದಕ್ಕೆ ಈ ಸಮೀಕ್ಷೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಮನೆ ಮನೆ ಗಣತಿಯ ಜೊತೆಗೆ ಮೊಬೈಲ್ ಆಪ್ ಮೂಲಕವೂ ಗಣತಿಗೆ ಅವಕಾಶ ನೀಡಲಾಗಿದೆ. ಬೆಳಗ್ಗೆ 6.30 ರಿಂದ ಸಂಜೆ 6.30ರ ತನಕ ಗಣತಿಗೆ ಅವಕಾಶ ನೀಡಲಾಗಿದೆ. ಇದಕ್ಕೆ ಪರಿಶಿಷ್ಟ ಜಾತಿ ಸಮುದಾಯದವರು ತಪ್ಪದೆ ವೋಟ್ ಮಾಡಬೇಕು. ನಾವೂ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲೂ ವರದಿ ಜಾರಿ ಬಗ್ಗೆ ಘೋಷಣೆ ಮಾಡಿದ್ದೆವು. ಒಳ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟಗ ಕೂಡ ಹೇಳಿದೆ. ಸಮುದಾಯದ ಸಂಘಟನೆಗಳು, ಮುಖಂಡರಿಗೂ ಒಳನೀಸಲಾತಿ ಬಗ್ಗೆ ಭರವಸೆ ನೀಡಿದ್ದೆವು. ಹೀಗಾಗಿ ದತ್ತಾಂಶ ಸಂಗ್ರಹದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡು ಮಾಹಿತಿ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಹೀಗಾಗಿ ಸಮೀಕ್ಷೆಯನ್ನ ಆರಂಭಿಸಿದ್ದಾರೆ. ಮೊಬೈಲ್ ಆಪ್ ಮೂಲಕವೂ ದತ್ತಾಂಶವನ್ನು ಸಂಗ್ರಹಣೆ ಮಾಡಲಾಗುತ್ತಿದೆ ಎಂದಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











