Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪ್ಪಿ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು..!

---Advertisement---

ಬೆಂಗಳೂರು; ನಟ, ನಿರ್ದೇಶಕ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕಕ್ಕೆ ಈಡಾಗಿದ್ದಾರೆ. ತಮ್ಮ ನೆಚ್ಚಿನ ನಟನಿಗೆ ಏನಾಯ್ತು, ಈಗ ಹೇಗಿದ್ದಾರೆ ಎಂಬ ಪ್ರಶ್ನೆ ಅವರನ್ನ ಕಾಡುತ್ತಿದೆ. ನಟ ಉಪೇಂದ್ರ ಅವರನ್ನ ಸ್ಪರ್ಶ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನೀಡುತ್ತಿದ್ದಾರೆ. ಉಪೇಂದ್ರ ಅವರ ಆರೋಗ್ಯದಲ್ಲಿ ದಿಢೀರ್ ಅಂತ ಏರುಪೇರು ಉಂಟಾಗಿದೆ.

ಉಪೇಂದ್ರ ಅವರು ಓವರ್ ಅಸಿಡಿಟಿಯಿಂದ ಬಳಲುತ್ತಾ ಇದ್ದಾರೆ. ಹೀಗಾಗಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಯಲಹಂಕದ ಸ್ಪರ್ಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಓವರ್ ಅಸಿಡಿಟಿ ಅನ್ನೋದು ಮನುಷ್ಯನಿಗೆ ಸಿಕ್ಕಾಪಟ್ಟೆ ಅನಾರೋಗ್ಯ ಸೃಷ್ಟಿಸುತ್ತದೆ. ಆದರೆ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.

ಯುಐ ಸಿನಿಮಾ ಮಾಡುವ ಸಮಯದಲ್ಲೂ ಇದೇ ರೀತಿ ಆಗಿತ್ತು. ಓವರ್ ಅಸಿಡಿಟಿಯಿಂದಾಗಿ ಅಂದು ಕೂಡ ಆಸ್ಪತ್ರೆಗೆ ದಾಖಲಾಗಿದ್ದರು. ಚೇತರಿಸಿಕೊಂಡು ಬಂದಿದ್ದರು. ಇದೀಗ ಮತ್ತೆ ಅದೇ ಸಮಸ್ಯೆಯಿಂದ ಬಳಲುತ್ತಾ ಇದ್ದಾರೆ. ಇದರಿಂದ ಸಹಜವಾಗಿಯೇ ಅವರ ಅಭಿಮಾನಿಗಳು ಆತಂಕದಲ್ಲಿದ್ದಾರೆ. ಆದರೆ ಮೂಲಗಳ ಪ್ರಕಾರ ಈಗ ಉಪೇಂದ್ರ ಅವರು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

ಈ ಸಿನಿಮಾ ಇಂಡಸ್ಟ್ರಿಯಲ್ಲಿರುವ ನಟ, ನಿರ್ದೇಶಕರು, ಕಲಾವಿದರಿಗೆ ಕೆಲವೊಮ್ಮೆ ಫ್ರೀ ಅನ್ನೋದೆ ಇರೋದಿಲ್ಲ. ಎಷ್ಟೋ ಸಲ ಕೆಲಸದ ಒತ್ತಡದಲ್ಲಿ ನಿದ್ದೆಯೂ ಸರಿಯಾಗಿ ಆಗಿರೋದಿಲ್ಲ. ಅಂತಹ ಲೈಫ್ ಸ್ಟೈಲ್ ಕಳೆಯುತ್ತಾರೆ. ಹೀಗಾಗಿಯೇ ಆರೊಇಗ್ಯದಲ್ಲಿ ಏರುಪೇರಾಗುತ್ತದೆ. ಅದರಲ್ಲೂ ಉಪೇಂದ್ರ ಅಂಥ ಅನುಭವಿ ನಟ, ನಿರ್ದೇಶಕರುಗಳಿಗೆ ಊಟ, ತಿಂಡಿ ಸರಿಯಾದ ಸಮಯಕ್ಕೆ ಆಗೋದೆ ಕಷ್ಟ. ಹೀಗಾಗಿಯೇ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಾಗಿರುತ್ತದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...