ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 06 : ಒಳ ಮೀಸಲಾತಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಗಣತಿ ಕಾರ್ಯ ಆರಂಭಿಸಿದ್ದು, ಆದಿ ದ್ರಾವಿಡ, ಆದಿ ಕರ್ನಾಟಕ ಹಾಗೂ ಇತರೆ ಉಪ ಜಾತಿಯ ಛಲವಾದಿ ಬಂಧುಗಳು ಕಡ್ಡಾಯವಾಗಿ ಛಲವಾದಿ-ಹೊಲೆಯ ಎಂದು ಬರೆಸುವಂತೆ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯ ಸಮಿತಿ
ನಿರ್ದೇಶಕ ಶಿವಪ್ರಸಾದ್ ಎಸ್. ವಿನಂತಿಸಿದ್ದಾರೆ.
ಜಸ್ಟಿಸ್ ನಾಗಮೋಹನ್‍ದಾಸ್‍ರವರ ಏಕ ಸದಸ್ಯ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳಿಗೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಮೀಸಲಾತಿ ಪ್ರಮಾಣವನ್ನು ಜನಸಂಖ್ಯೆಗನುಗುಣವಾಗಿ ಹಂಚಿಕೆ ಮಾಡಲು ಜಾತಿ ಗಣತಿಯನ್ನು ಆರಂಭಿಸಿದೆ. ಮನೆ ಮನೆಗೆ ಗಣತಿಗೆ ಬರುವವರಿಗೆ ನಿಖರವಾದ ಮಾಹಿತಿಯನ್ನು ನೀಡಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಶಿವಪ್ರಸಾದ್ ಎಸ್. ಛಲವಾದಿಗಳಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















