Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಶಾಸಕ.. ಶಿಕ್ಷೆ ಕಡಿಮೆ ಮಾಡಿ ಎಂದ ಜನಾರ್ದನ ರೆಡ್ಡಿ ಮನವಿಗೆ ಗರಂ ಆದ ಜಡ್ಜ್ ಏನಂದ್ರು..?

---Advertisement---

 

ಹಲವು ವರ್ಷಗಳ ಕಾಲ ಜೈಲುವಾಸ ಅನುಭವಿಸಿ, ಬಳ್ಳಾರಿಗೆ ಬರಲು ಸಾಧ್ಯವಾಗದೆ, ಗಂಗಾವತಿಯಿಂದ ಸ್ಪರ್ಧೆ ಮಾಡಿ, ಗೆದ್ದಿದ್ದ ಜನಾರ್ದನ ರೆಡ್ಡಿ ಇಂದು ಮತ್ತೆ ಜೈಲು ಸೇರಿದ್ದಾರೆ. ಬರೋಬ್ಬರಿ ಏಳು ವರ್ಷಗಳ ಕಾಲ ಸೆರೆವಾಸದ ಶಿಕ್ಷೆ ಸಿಕ್ಕಿದೆ‌. ಜನಾರ್ದನ ರೆಡ್ಡಿ ಅವರನ್ನು ಅರೆಸ್ಟ್ ಮಾಡಿದ ಪೊಲೀಸರು, ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಜಡ್ಜ್ ಮುಂದೆ ಮನವಿ ಮಾಡಿಕೊಂಡು, ನ್ಯಾಯಾಧೀಶರ ಕೋಪಕ್ಕೆ ತುತ್ತಾಗಿದ್ದಾರೆ ಜನಾರ್ದನ ರೆಡ್ಡಿ ಅವರು.

ಇಂದು ಕೋರ್ಟ್ ಮುಂದೆ ಜನಾರ್ದನ ರೆಡ್ಡಿ ಅವರನ್ನ ಹಾಜರು ಪಡಿಸಲಾಗಿತ್ತು. ಸಿಬಿಐ ಕೋರ್ಟ್ ಜನಾರ್ದನ ರೆಡ್ಡಿ ಅವರಿಗೆ 7 ವರ್ಷಗಳ ಕಾಲ ಶಿಕ್ಷೆಯನ್ನ ವಿಧಿಸಿತ್ತು. ಶಿಕ್ಷೆ ಪ್ರಕಟವಾಗುತ್ತಿದ್ದಂತೆ ನ್ಯಾಯಾಧೀಶರಿಗೆ ಮನವಿ ಮಾಡಿದ್ದಾರೆ. ನಾನೀಗ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದೇನೆ. ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ ಎಂದು ಮನವಿ ಮಾಡಿದ್ದರು.

ಇದನ್ನು ಕೇಳಿಸಿಕೊಂಡ ನ್ಯಾಯಾಧೀಶರು, ತರಾಟೆಗೆ ತೆಗೆದುಕೊಂಡಿದ್ದು, ನಿಮ್ಮ ತಪ್ಪಿಗೆ ಜೀವಾವಧಿ ಶಿಕ್ಷೆ ನೀಡಬೇಕು. ನಿಮ್ಮ ಅಪರಾಧಕ್ಕೆ ಹತ್ತು ವರ್ಷ ಶಿಕ್ಷೆ ಕೊಟ್ಟರು ಕಡಿಮೆಯೇ ಎಂದು ಗರಂ ಆಗಿದ್ದಾರೆ. ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆಯಲ್ಲಿ ಮತ್ತೆ ಗಾಲಿ ಜನಾರ್ದನ ರೆಡ್ಡಿ ಲಾಕ್ ಆಗಿದ್ದಾರೆ. ಮೈನಿಂಗ್ ಕೇಸ್ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪನ್ನ ನೀಡಿದೆ. ಸಿಬಿಐ ಕೇಸಲ್ಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆಯಾಗಿದೆ. ಮತ್ತೊಮ್ಮೆ ಚಂಚಲಗೂಡು ಜೈಲಿಗೆ ಹೋಗೋದು ಫಿಕ್ಸ್ ಆಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment