ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಮೇ. 07 : ಸಂಸ್ಕಾರ, ಸಂಸ್ಕೃತಿ ಜತೆಗೆ ದೇಸಿ ಕಲಾಸಕ್ತಿ ಬೆಳೆಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಪದವಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಾಂಸ್ಕೃತಿಕ ಸಮಿತಿ ಇವುಗಳ ಸಹ ಯೋಗದಲ್ಲಿ ಬುಧವಾರ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಜಾನಪದ ಸಂಭ್ರಮ ಕರ‍್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಷ್ಟೇ ಹಣವಿದ್ದರೂ ಬಾಲ್ಯದಲ್ಲಿ ಉಂಡು ಸಂತಸಪಟ್ಟ ಊಟ ಉಪಚಾರಗಳು ಇಂದು ದೊರೆಯುತ್ತಿಲ್ಲ. ಆಗಿನ ವಿವಿಧ ಆಟಗಳು ಬಾಲ್ಯದ ಭವ್ಯ ನೆನಪು ಕಟ್ಟಿಕೊಡುತ್ತವೆ.
ಹೀಗಾಗಿ ಮೊಬೈಲ್, ವಾಟ್ಸ್ಆಪ್, ಪೇಸ್‌ಬುಕ್ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗದೆ ಮೌಲ್ಯಯುತ ವಿದ್ಯೆ ಕಲಿಯುವ ಮೂಲಕ ಪರಂಪರೆಯ ಜ್ಞಾನ ಬೆಳೆಸುವ ದೇಸಿ ಕಲೆ,ಸಂಸ್ಕೃತಿ ಮುಂತಾದ ಸಾಂಸ್ಕೃತಿಕ ಚಟವಟಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ.ಕೆ.ಆರ್.ಜೆ.ರಾಜಕುಮಾರ್, ಪ್ರಾಂಶುಪಾಲ ಪ್ರೊ.ಬಿ.ಎಸ್.ಮಂಜುನಾಥ್, ಇತಿಹಾಸ ಪ್ರಾಧ್ಯಾಪಕಿ ಪ್ರೊ.ಬಿ.ಜಯಮ್ಮ, ಕನ್ನಡ ಪ್ರಾಧ್ಯಾಪಕ ಪ್ರೊ.ಚಿತ್ತಯ್ಯ ಮಾತನಾಡಿದರು.
ಆಕರ್ಷಿಸಿದ ಭವ್ಯ ಮೆರವಣಿಗೆ : ಪೂರ್ಣಕುಂಭ, ತಮಟೆ, ಕಹಳೆ, ಉರುಮೆ, ಗೊರವರ ಕುಣಿತ, ಜಾನಪದ ವಾದ್ಯ ಮತ್ತು ಅಲಂಕರಿಸಿದ ಜೋಡೆತ್ತು ಗಾಡಿ ಮೂಲಕ ಶಾಸಕರನ್ನು ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.
ದೇಸಿ ದಿರಿಸಿನ ಬಣ್ಣ ಬಣ್ಣದ ಸೀರೆ ಉಟ್ಟಿದ್ದ ವಿದ್ಯಾರ್ಥಿನಿಯರು, ಬಿಳಿ ಬಣ್ಣದ ಶರ್ಟ್, ಪಂಚೆ ತೊಟ್ಟಿದ್ದ ವಿದ್ಯಾರ್ಥಿಗಳು ವಾದ್ಯದ ತಾಳಕ್ಕೆ ಹೆಜ್ಜೆ ಹಾಕುತ್ತ ಮೆರವಣಿಗೆಯಲ್ಲಿ ಸಂಭ್ರಮಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ಪ್ರಕಾಶಮೂರ್ತಿ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಸಮಿತಿ ಅಧ್ಯಕ್ಷ ಕೆ.ವೀರಭದ್ರಯ್ಯ, ಪರಶುರಾಂಪುರ ಹೋಬಳಿ ಸಮಿತಿ ಅಧ್ಯಕ್ಷ ಜಿ.ಟಿ.ಶಶಿಧರ್, ನಗರಸಭೆ ಅಧ್ಯಕ್ಷೆ ಮಂಜುಳಾ ಆರ್.ಪ್ರಸನ್ನಕುಮಾರ್, ಉಪಾಧ್ಯಕ್ಷೆ ಕವಿತಾ ಬೋರಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ, ಎಂ.ಜೆ.ರಾಘವೇAದ್ರ, ರಮೇಶ್‌ಗೌಡ, ಸದಸ್ಯೆ ಸುಜಾತ ಪ್ರಹ್ಲಾದ್, ಹಿರಿಯ ಪ್ರಾಧ್ಯಪಕ ಪ್ರೊ.ಮಂಜುನಾಥ್, ಪ್ರೊ.ಬಣಕರ್, ಪ್ರೊ.ರಂಗಸ್ವಾಮಿ ಇದ್ದರು.
ಚಳ್ಳಕೆರೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು, ಪೂರ್ಣಕುಂಭ, ತಮಟೆ, ಕಹಳೆ, ಉರುಮೆ, ಗೊರವರ ಕುಣಿತ, ಜಾನಪದ ವಾದ್ಯ ಮತ್ತು ಅಲಂಕರಿಸಿದ ಜೋಡೆತ್ತು ಗಾಡಿ ಮೂಲಕ ಶಾಸಕರನ್ನು ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













