Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ : ಕೆ ಅಭಿನಂದನ್

---Advertisement---

ಹಿರಿಯೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿರುವುದು ಭಾರತೀಯ ಸೈನೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಕೆ ಅಭಿನಂದನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಪಹಲ್ಗಾಮ್ ಘಟನೆಯಲ್ಲಿ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿದ ಉಗ್ರರಿಗೆ ನಮ್ಮ ದೇಶ ಪಾಕಿಸ್ತಾನಕ್ಕೆ ಮುಟ್ಟಿ ನೋಡಿಕೊಳ್ಳುವಂತೆ ದಾಳಿ ನಡೆಸಿ, ಉಗ್ರರ ನೆಲೆಗಳನ್ನು ನಾಶಪಡಿಸಿದೆ. ʻಆಪರೇಷನ್‌ ಸಿಂಧೂರʼ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ ಎಂದರು.

ಪಾಕಿಸ್ತಾನ ಇಲ್ಲಿಗೆ ತನ್ನ ಕೆಟ್ಟ ಚಾಳಿಯನ್ನು ಕೈಬಿಟ್ಟರೆ ಒಳ್ಳೆಯದು. ಇಲ್ಲವಾದರೆ ಇದು ಇನ್ನೂ ಆರಂಭ, ಇಡೀ ಜಗತ್ತೇ ತಿರುಗಿ ನೋಡುವಂತೆ ಅಂತ್ಯ ಇನ್ನು ಘೋರವಾಗಿರುತ್ತದೆ. ಪಾಕಿಸ್ತಾನದ ದೇಶದೊಳಗೆ ನುಗ್ಗಿ, ಉಗ್ರರರನ್ನು ಸೆದೆಬಡಿದಿರುವ ಭಾರತೀಯ ಸೈನಿಕರ ಶಕ್ತಿಯನ್ನು ಅನೇಕ ರಾಷ್ಟ್ರಗಳು ಕೊಂಡಾಡುತ್ತಿದ್ದಾರೆ. ಭಯೋತ್ಪಾದಕತೆಯನ್ನು ಮಟ್ಟ ಹಾಕಲು ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಾವೆಲ್ಲರೂ ಕೈಜೋಡಿಸಬೇಕು ಎಂದು ಅವರು ತಿಳಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment