ಹಾವೇರಿ, ಮೇ 08 : ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾದ (accident) ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ (death) ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ನಡೆದಿದೆ.
ಮೃತರನ್ನು ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಸೇರಿದಂತೆ ಮತ್ತಿಬ್ಬರು ಸಾವನ್ನಪ್ಪಿದ್ದಾರೆ ಎಂದು ಗುರುತಿಸಲಾಗಿದೆ. ಮೃತರು ರಾಣೆಬೇನ್ನೂರು ನಗರದ ಬೇಕರಿ ವ್ಯಾಪಾರಿಗಳು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸಂಬಂಧಿಕರೆಲ್ಲಾ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವವರಿದ್ದರು. ಆದರೆ ಅಷ್ಟರಲ್ಲೇ ಈ ದುರಂತ ಸಂಭವಿಸಿದೆ.
ಅತಿಯಾದ ವೇಗದ ಚಾಲನೆಯಿಂದಾಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಡಿಕ್ಕಿ ಹೊಡಿದಿದ್ದಾನೆ. ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಹಾವೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶವಗಳ ರವಾನೆ ಮಾಡಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















