ಆಪರೇಷನ್ ಸಿಂಧೂರದ ಬೆನ್ನಲ್ಲೇ ತುಂಗಾ, ಭದ್ರಾ ಸೇರಿದಂತೆ ಜಲಾಶಯಗಳ ಭದ್ರತೆಗೆ ಸೂಚನೆ..!

suddionenews
1 Min Read

ಬೆಂಗಳೂರು; ಪಾಕಿಸ್ತಾನಿಯರ ಹುಟ್ಟಡಗಿಸಲು ಆಪರೇಷನ್ ಸಿಂಧೂರದ ಮೂಲಕ ಭಾರತ ದಾಳಿ ನಡೆಸಿದೆ. ಒಂದೇ ದಾಳಿಗೆ ಪಾಪಿ ಪಾಕಿಸ್ತಾನ ನಲುಗಿ ಹೋಗಿದೆ. ಭಯೋತ್ಪಾದಕರ 9 ನೆಲೆಗಳ ಮೇಲೆ ಭಾರತೀಯ ಸೇನೆ ಯಶಸ್ವಿಯಾಗಿ ಸೇಡು ತೀರಿಸಿಕೊಂಡಿದೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಕಟ್ಟು ನಿಟ್ಟಿನ ಎಚ್ಚರಿಕೆಯನ್ನ ನೀಡಿದ್ದಾರೆ. ಯಾವಾಗ ಬೇಕಾದರೂ ಪಾಕಿಸ್ತಾನದವರು ಪ್ರತಿದಾಳಿ ನಡೆಸಬಹುದು. ಹೀಗಾಗಿ ಎಚ್ಚರದಿಂದ ಇರಲು ಹಾಗೂ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈಗಾಗಲೇ ಮಾಕ್ ಡ್ರಿಲ್ ತರಬೇತಿಯನ್ನು ನೀಡಿದ್ದಾರೆ.

ಆಪರೇಷನ್ ಸಿಂಧೂರ್ ಬೆನ್ನಲ್ಲೆರ ರಾಜ್ಯ ಸರ್ಕಾರ ತುರ್ತು ಆದೇಶ ಹೊರಡಿಸಿದೆ. ರಾಷ್ಟ್ರದ ಪ್ರಸ್ತುತ ಬೆಳವಣಿಗೆಗಳ ಹಿನ್ನಲೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳಿಗೆ ಬಿಗಿ ಭದ್ರತೆಯನ್ನು ನೀಡುವಂತೆ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಸತ್ಯಮೂರ್ತಿ ಬಿ.ಕುಲಕರ್ಣಿ ಆದೇಶ ಹೊರಡಿಸಿದ್ದಾರೆ. ಹೀಗಾಗಿ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಿ ಹೆಚ್ಚಿನ ಭದ್ರತೆ ಒದಗಿಸಲು ಆದೇಶ ನೀಡಲಾಗಿದೆ. ಕಾವೇರಿ ನಿರಾವರಿ, ಹೇಮಾವತಿ, ತುಂಗಾ, ಭದ್ರಾ, ಆಲಮಟ್ಟಿ ಸೇರಿದಂತೆ ರಾಜ್ಯದ 17 ಜಲಾಶಯಗಳಿಗೂ ಭದ್ರತೆ ಒದಗಿಸಲಾಗಿದೆ.

 

ತಮ್ಮ ನಿಗಮ ಮತ್ತು ವಲಯ ವ್ಯಾಪ್ತಿಯಲ್ಲಿ ಬರುವ ಅಣೆಕಟ್ಟುಗಳಿಗೆ ಭದ್ರತೆ ನೀಡಿ ಆದೇಶ ಬೆನ್ನಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ. ಹೀಗಾಗಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವ ಆದೇಶ ನೀಡಿದ್ದಾರೆ. ಒಂದು ವೇಲಕೆ ಭದ್ರತೆಯಲ್ಲಿ ಯಾವುದೇ ಚ್ಯುತಿಯಾದಲ್ಲಿ ಸಂಬಂಧ ಪಟ್ಟ ಯೋಜನಾ ಅಧಿಕಾರಿ ಅಥವಾ ಅಣೆಕಟ್ಟು ಅಧಿಕಾರಿಗಳೇ ಹೊಣೆಗಾರರಾಗಿರುತ್ತಾರೆ ಎಂದು ಈಗಾಗಲೇ ಎಚ್ಚರಿಕೆಯನ್ನು ನೀಡಲಾಗಿದೆ. ರಾಜ್ಯದ 17 ಅಣೆಕಟ್ಟುಗಳ ಮುಖ್ಯ ಎಂಜಿನಿಯರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ಖಡಕ್ ಸೂಚನೆಯನ್ನು ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks