Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ನೂತನ ಜಿಲ್ಲಾಡಳಿತ ಭವನ ಕಟ್ಟಡ ಆರು ತಿಂಗಳಲ್ಲಿ ಪೂರ್ಣ : ಸಚಿವ ಡಿ.ಸುಧಾಕರ್

---Advertisement---

ಚಿತ್ರದುರ್ಗ.ಮೇ.08: ನೂತನ ಜಿಲ್ಲಾಡಳಿತ ಭವನದ ಕಟ್ಟಡ ನಿರ್ಮಾಣ ಕಾರ್ಯವನ್ನು ಇನ್ನೂ ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.

ನಗರದ ಕುಂಚಿಗನಾಳ್ ಕಣಿವೆ ಬಳಿ ನಿರ್ಮಾಣವಾಗುತ್ತಿರುವ ಜಿಲ್ಲಾಡಳಿತ ಭವನದ ಕಟ್ಟಡ ಕಾಮಗಾರಿಗೆ ಭೇಟಿ ನೀಡಿ ಅವರು ಮಾತನಾಡಿದರು.

 

ರೂ.25 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದ ಈ ಕಟ್ಟಡಕ್ಕೆ ಈಗಾಗಲೇ ರೂ.46 ಕೋಟಿ ವೆಚ್ಚವಾಗಿದೆ. ಪ್ರಸ್ತುತ ರೂಪಿಸಿರುವ ಯೋಜನೆಯಲ್ಲಿ ಕುಡಿಯುವ ನೀರು, ಕ್ಯಾಂಟೀನ್, ಸಂಪರ್ಕ ರಸ್ತೆ, ಪಾರ್ಕಿಂಗ್,  ಅಗ್ನಿನಿಯಂತ್ರಕ ವ್ಯವಸ್ಥೆ, ಕೊರೆದಿರುವ ಗುಡ್ಡಕ್ಕೆ ರಕ್ಷಣಾ ವ್ಯವಸ್ಥೆ, ಪೀಠೋಪಕರಣಗಳು, ಇಂಟಿರಿಯರ್ ಸೇರಿದಂತೆ ಇನ್ನೂ ಹಲವು ಕಾಮಗಾರಿಗಳಿಗೆ ಯೋಜನಾ ವೆಚ್ಚ ಸಿದ್ಧಪಡಿಸಿರುವುದಿಲ್ಲ. ಈ ಎಲ್ಲ ಕಾಮಗಾರಿಗಳಿಗೆ ಇನ್ನೂ ಸುಮಾರು ರೂ.15 ಕೋಟಿ ಅನುದಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಜಿಲ್ಲಾಡಳಿತ ಭವನದ ಕಟ್ಟಡ ಕಾಮಗಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗಮನಕ್ಕೆ ತಂದು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಹೆಚ್ಚುವರಿ ಅನುದಾನ ಬಿಡುಗಡೆ ಮನವಿ ಮಾಡಲಾಗುವುದು ಎಂದು ಹೇಳಿದರು.
ನೂತನ ಜಿಲ್ಲಾಡಳಿತ ಭವನದ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವು ಇಲಾಖೆಗಳು ಕಾರ್ಯನಿರ್ವಹಿಸಲಿದ್ದು, ಚಿತ್ರದುರ್ಗ ಉಪವಿಭಾಗ ಕಚೇರಿ ನಗರದೊಳಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ, ಗುತ್ತಿಗೆದಾರ ಪಾಲಾಕ್ಷಯ್ಯ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...