Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

IPL ಟೂರ್ನಿಮೆಂಟ್ ಸಂಪೂರ್ಣ ಮುಂದೂಡಿಕೆ..!

---Advertisement---

ಈ ಬಾರಿಯ ಐಪಿಎಲ್ ಮ್ಯಾಚ್ ಸಂಪೂರ್ಣವಾಗಿ ಮುಂದೂಡಿಕೆಯಾಗಿದೆ. ಪಾಕ್ ಮೇಲೆ ಭಾರತ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಈ ರೀತಿಯ ನಿರ್ಧಾರವನ್ನ ತೆಗೆದುಕೊಂಡಿದೆ. ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಪಾಕಿಸ್ತಾನದ ಮೇಲೆ ದಾಳಿ ನಡೆಯುತ್ತಿದೆ. ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಈ ದಾಳಿ ನಡೆಯುತ್ತಿದೆ. ಈಗಾಗಲೇ ಉಗ್ರರ ಸಾಕಷ್ಟು ಅಡಗುತಾಣಗಳನ್ನು ಉಡೀಸ್ ಮಾಡಲಾಗಿದೆ. ಈಗ ಎಲ್ಲರೂ ಎಚ್ಚರಿಕೆಯಿಂದ ಇರಬೇಕಾಗಿರುತ್ತದೆ. ಹೀಗಾಗಿ ರಿಸ್ಕ್ ತೆಗೆದುಕೊಳ್ಳಲು ರೆಡಿ ಇಲ್ಲ ಎಂದು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪಂದ್ಯವನ್ನು ಅರ್ಧದಲ್ಲಿಯೇ ಮೊಟಕುಗೊಳಿಸಲಾಗಿತ್ತು. ಇದೀಗ ಮೇ 25ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ವಿದೇಶಿ ಆಟಗಾರರ ಭದ್ರತೆಯ ದೃಷ್ಟಿಯಿಂದ ಬಿಸಿಸಿಐ ಯಾವುದೇ ಸವಾಲುಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಹೀಗಾಗಿ ದೇಶದಲ್ಲಿ ನಡೆಯಬೇಕಿದ್ದ ಈ ಬಾರಿಯ ಐಪಿಎಲ್ ಟೂರ್ನಿಯನ್ನು ಸಂಪೂರ್ಣವಾಗಿ ಮುಂದೂಡಿಕೆ ಮಾಡಲಾಗಿದೆ.

ಹೀಗೆ ಪಂದ್ಯಗಳು ರದ್ದಾದ ಕಾರಣ ಆರ್ಸಿಬಿ ಅಭಿಮಾನಿಗಳಿಗೆ ಬೇಸರ ತರಿಸಿದೆ. ಈ ಸಲ ಕಪ್ ನಮ್ದೆ ಕಪ್ ನಮ್ಮದೆ ಅನ್ನೋ ಆಸೆಯಲ್ಲಿದ್ದರು. ಆದರೆ ಈಗ ನೋಡಿದ್ರೆ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಸತತ 17 ಸೀಸನ್ ಗಳಿಂದ ಕಾಯುತ್ತಿದ್ದ ಆರ್ಸಿಬಿ ಅಭಿಮಾನಿಗಳಿಗೆ ಈ ಸೀಸನ್ ಭರವಸೆಯನ್ನ ನೀಡಿತ್ತು. ಪಾಯಿಂಟ್ಸ್ ಟೇಬಲ್ ನಲ್ಲಿ ಎರಡನೇ ಸ್ಥಾನದಲ್ಲಿದ್ದು, ಫ್ಲೇ ಆಫ್ ಹಂತಕ್ಕೆ ತಲುಪಿತ್ತು. ಆದರೆ ಈಗ ಐಪಿಎಲ್ ಟೂರ್ನಿಯನ್ನೇ ರದ್ದುಗೊಳಿಸಿರುವುದು ಆಘಾತಕ್ಕೆ ಕಾರಣವಾಗಿದೆ. ದೇಶ ಮೊದಲು ಕ್ರಿಕೆಟ್ ಆಮೇಲೆ ಎಂಬ ನಿಲುವಿನ ಹಿನ್ನೆಲೆ ಐಪಿಎಲ್ ಟೂರ್ನಿಮೆಂಟ್ ಅನ್ನು ರದ್ದು ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...