ಬೆಂಗಳೂರು; ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಮ್ಮ ಇಂಡಿಯನ್ ಆರ್ಮಿ ಕಣ್ಣಿಟ್ಟಿದೆ. ಹುಡುಕಿ ಹುಡುಕಿ ಹೊಸಕಿ ಹಾಕ್ತಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಸಂಘರ್ಷ ಹೆಚ್ಚಾದ ಹಿನ್ನೆಲೆ ದೇಶಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಉದ್ವಿಗ್ನತೆ ಹೆಚ್ಚಾದ ಬೆನ್ನಲ್ಲೇ ಇದೀಗ ದೇಶದ 24 ವಿಮಾನ ನಿಲ್ದಾಣಗಳನ್ನ ಬಂದ್ ಮಾಡಲಾಗಿದೆ. ಯಾವುದೇ ಸಂಚಾರವಿಲ್ಲ. ಈ ಬೆನ್ನಲ್ಲೇ ನಾಳೆ ಸಿಎಂ ಸಿದ್ದರಾಮಯ್ಯ ಅವರು ತುರ್ತು ಸಭೆ ಕರೆದಿದ್ದಾರೆ. ಹಲವು ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ ಫಿಕ್ಸ್ ಮಾಡಿದ್ದಾರೆ.
ರೈಲ್ವೆ ಸ್ಟೇಷನ್, ಮೆಟ್ರೋ ಸ್ಟೇಷನ್, ಜಲಾಶಯಗಳು, ಅಣುಸ್ಥಾವರ ಸೇರಿದಂತೆ ದೇಶದ ಹಲವು ಪ್ರಮುಖ ಪ್ರದೇಶಗಳ ಮೇಲೆ ನಿಗಾ ಇಡಲಾಗಿದೆ. ಎಲ್ಲೆಡೆ ಬಿಗಿ ಭದ್ರತೆಯನ್ನು ಒದಗಿಸಲಾಗಿದ್ದು, ಟೈಟ್ ಸೆಕ್ಯೂರಿಟಿ ನೀಡಲಾಗಿದೆ. ಈಗಾಗಲೇ ಹಿಂದೂಗಳನ್ನ ಟಾರ್ಗೆಟ್ ಮಾಡಿದ್ದ ಪಾಕ್ ಗೆ ಭಾರತ ಸರಿಯಾಗಿಯೇ ಬುದ್ದಿ ಕಲಿಸಿದೆ. ಇದರ ನಡುವೆ ಪಾಪಿ ಪಾಕಿಸ್ತಾನ ಯಾವಾಗ, ಹೇಗೆ ಬೇಕಾದರೂ ಅಟ್ಯಾಕ್ ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ ಭಾರತ ಹೆಚ್ಚಿನ ಕಟ್ಟೆಚ್ಚರ ವಹಿಸಿದೆ.
ಈ ಬೆನ್ನಲ್ಲೇ ನಾಳೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೆ ಸಭೆ ಕರೆದಿದ್ದಾರೆ ಎನ್ನಲಾಗಿದೆ. ಡಿಸಿ, ಎಸ್ಪಿ, ಪೊಲೀಸ್ ಕಮಿಷನರ್ ಗಳ ಜೊತೆಗೆ ಸಭೆ ನಡೆಸಲಿದ್ದಾರೆ. ನಾಗರಿಕರ ರಕ್ಷಣಾ ಕಾರ್ಯಗಳಿಗೆ ಸಂಬಂಧಿಸಿದಂತೆ ಈ ಸಭೆ ನಡೆಯಲಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ದೇಶದ ಸುರಕ್ಷತೆಯನ್ನ ಕೇಂದ್ರ ಸರ್ಕಾರ ಹೇಗೆ ನಿಭಾಯಿಸುತ್ತಿದೆಯೋ ಅದೇ ರೀತಿ ರಾಜ್ಯದ ಸುರಕ್ಷತೆ ಬಹಳ ಮುಖ್ಯವಾಗುತ್ತದೆ. ಹೀಗಾಗಿ ಎಲ್ಲಾ ಸೂಕ್ತ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















