Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲೆಗಳಲ್ಲಿ ಖಾಯಂ ಶಿಕ್ಷಕರ ಕೊರತೆ ; ಮುಂದಿನ ನಿರ್ಧಾರವೇನು..?

---Advertisement---

ಬೆಂಗಳೂರು; 2025-26ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಬೇಸಿಗೆಯ ರಜೆಯಲ್ಲಿರುವ ಮಕ್ಕಳು ಶಾಲೆಗೆ ಹೋಗುವುದಕ್ಕೆ ಎಲ್ಲಾ ರೀತಿಯ ತಯಾರಿ ನಡೆಸುತ್ತಿದ್ದಾರೆ. ಖಾಸಗಿ ಶಾಲೆಗಳ ಮಕ್ಕಳ ಶಿಕ್ಷಣ ಹೇಗೋ ನಡೆದು ಹೋಗುತ್ತೆ. ಆದರೆ ಸರ್ಕಾರಿ ಶಾಲೆಯ ಮಕ್ಕಳ ಶಿಕ್ಷಣಕ್ಕೇನೆ ಹೆಚ್ಚಿನ ಕೊರತೆ ಕಾಡುತ್ತಿರುವುದು. ಯಾಕಂದ್ರೆ ಸರ್ಕಾರಿ ಶಾಲೆಗಳು ಸಾಕಷ್ಟು ಕೊರತೆಯಿಂದ ಮುಚ್ಚಿ ಹೋಗುತ್ತಿವೆ. ಖಾಸಗಿ ಶಾಲೆಯಲ್ಲಿ ಎಲ್ಲಾ ವ್ಯವಸ್ಥೆ ಇರುತ್ತದೆ. ಆದರೆ ಸರ್ಕಾರಿ ಶಾಲೆಯಲ್ಲಿ ವ್ಯವಸ್ಥೆಗಳು ಅಷ್ಟಕ್ಕೆ ಅಷ್ಟೇ. ಈಗಲೂ ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಲಭ್ಯ ಬಿಡಿ ಅತ್ತ ಶಿಕ್ಷಕರ ಕೊರತೆಯೂ ಸರಿ ಹೋಗಿಲ್ಲ.

ಶಾಲೆಗಳು ಪುನರಾರಂಭವಾಗುತ್ತಿದ್ದು, ಇನ್ನು ಕೂಡ ಸರ್ಕಾರಿ ಶಾಲೆಗಳಲ್ಲಿ ಇನ್ನು ಕೂಡ ಖಾಯಂ ಶಿಕ್ಷಕರನ್ನ ನೇಮಕ ಮಾಡಿಲ್ಲ. ಇತ್ತ ಅತಿಥಿ ಶಿಕ್ಷರನ್ನ ನೇಮಕ ಮಾಡುವ ಉಸಾಬರಿಗೂ ಹೋಗಿಲ್ಲ. ಇದು ಪೋಷಕರ ಆಕ್ರೋಶಕ್ಕೆ ಕಾತಣವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಶೇಕಡ 66 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ನಿರೀಕ್ಷಿತ ಮಟ್ಟ ತಲುಪಿಲ್ಲ.

ಈ ಸಂಬಂಧ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಳಕಳ ವ್ಯಕ್ತಪಡಿಸಿದ್ದು, ಸರ್ಕಾರಿ ಶಾಲೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ಪೋಷಕರ ವಲಯದಲ್ಲಿವತೀವ್ರ ಆತಂಕ ಎದುರಾಗಿದೆ. ಈ ಸಂಬಂಧ ಪೋಷಕರ ಹೋರಾಟ ಸಮಿತಿ ಅಧ್ಯಕ್ಷ ಯೋಗಾನಂದ, ಅತಿಥಿ ಶಿಕ್ಷಕರ ನೇಮಕವು ಕೂಡ ಅವೈಜ್ಞಾನಿಕವಾಗಿದೆ. ನುರಿತ ಶಿಕ್ಷಕರ ನೇಮಕದಿಂದ ಮಾತ್ರ ಸರ್ಕಾರಿ ಶಾಲೆಗಳಲ್ಲಿ ಸುಧಾರಣೆ ಆಗಲಿದೆ ಎಂದು ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment