Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಾಜಿ ಮಹಾರಾಜರಿಗೆ ಗೌರವ ಕೊಡೋಣಾ, ಹಾಗಂತ ರಾಯಣ್ಣನ ಬಗ್ಗೆ ಅಸಡ್ಡೆ ಯಾಕೆ : ಕುಮಾರಸ್ವಾಮಿ ಪ್ರಶ್ನೆ

Facebook
Twitter
Telegram
WhatsApp

ಬೆಂಗಳೂರು: ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಠಾಕ್ರೆ ಪಿಎಂಗೆ ಪತ್ರ ಬರೆದಿದ್ದಾರೆ. ಕನ್ನಡಿಗರದ್ದು ವಿಕೃತ ಮನಸ್ಸು ಎಂದು ಆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದು ಕನ್ನಡಿಗರನ್ನ ಮತ್ತಷ್ಟು ಕೆಣಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ.

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ?.

ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು?.

ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ?.

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

error: Content is protected !!