ವಿಜಯಪುರ; ಶಾಸಕ ಬಸನಗೌಡ ಪಾಟೀಲ್ ಅವರನ್ನ ಈಗಾಗಲೇ ಬಿಜೆಪಿ ಪಕ್ಷ ಉಚ್ಛಾಟನೆ ಮಾಡಿದೆ. ಅದು ಆರು ವರ್ಷಗಳ ಕಾಲ. ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳುತ್ತಾರಾ ಇಲ್ವಾ ಅನ್ನೋದು ಗೊತ್ತಿಲ್ಲದ ಮಾಹಿತಿ. ಇದೀಗ ಶಾಸಜ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಆ ಬಗ್ಗೆ ಮಾತನಾಡಿದ್ದಾರೆ. ನಾನು ಮತ್ತೆ ಬಿಜೆಪಿಗೆ ಬರ್ತೇನೆ ಅಂತ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, ನನ್ನನ್ನು ಪಕ್ಷದಿಂದ ಶಾಶ್ವತವಾಗಿ ಹೊರಹಾಕಲಾಗಿದೆ ಎಂದು ಹಲವರು ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲವರಿಗೆ ಹುಚ್ಚು ಹಿಡಿದಿದ್ದು, ಎಲ್ಲರೂ ನನ್ನನ್ನು ಬಿಜೆಪಿಗೆ ಮತ್ತೆ ಕರೆಸಿಕೊಳ್ಳುವುದಿಲ್ಲ ಎಂದು ಭಾವಿಸಿದ್ದಾರೆ ಎಂದಿದ್ದಾರೆ.
ಆದರೆ ಮೇಲಿನವರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ನಾನು ರಾಜ್ಯದ ಯಾವ ನಾಯಕರ ಮನೆಗೂ ಹೋಗಲ್ಲ. ಹೋಗೋದು ಇಲ್ಲ ಎಂದು ಹೊಸ ಬಾಂವ್ ಒಂದನ್ನ ಸಿಡಿಸಿದ್ದಾರೆ. ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದ ನಂತರವೇ ನನ್ನ ಪಕ್ಷಕ್ಕೆ ವಾಪಸ್ ಕರೆಸಿಕೊಳ್ಳುವುದಾಗಿ ಪಕ್ಷದ ವರಿಷ್ಠರು ಹೇಳಿದ್ದಾರೆ ಎಂದಿದ್ದಾರೆ. ಈ ಮೂಲಕ ಪಕ್ಷಕ್ಕೆ ಮತ್ತೆ ಬರ್ತೇನೆ ಅಂತಾನು ಸುಳಿವು ನೀಡಿದ್ದಾರೆ.
ಈ ಹಿಂದೆ ವಿಜಯೇಂದ್ರ ಅವರ ವಿರುದ್ಧ ತೊಡೆತಟ್ಟಿದ್ದ ಯತ್ನಾಳ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರಿಗೆ ದೂರು ಕೊಟ್ಟಿದ್ದರು. ಅಲ್ಲದರ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸುವ ಸವಾಲು ಕೂಡ ಹಾಕಿದ್ದರು. ನಾನು ಕೂಡ ಆ ಸ್ಥಾನದ ಆಕಾಂಕ್ಷಿ ಎಂದಿದ್ದ ಯತ್ನಾಳ್ ಅವರನ್ನೇ ಪಕ್ಷ ದಿಢೀರನೇ ಉಚ್ಛಾಟನೆ ಮಾಡಿತ್ತು. ಇದು ಎಲ್ಲರಿಗೂ ಶಾಕಿಂಗ್ ಸುದ್ದಿಯೂ ಆಗಿತ್ತು. ಈಗ ನೋಡಿದ್ರೆ ಮತ್ತೆ ವಿಜಯೇಂದ್ರ ಸ್ಥಾನದ ಬಗ್ಗೆಯೇ ಮಾತನಾಡಿದ್ದಾರೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






