Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

CBSE 12ನೇ ತರಗತಿ ಫಲಿತಾಂಶ : ಯಾವ ರಾಜ್ಯ ಮೊದಲು.. ಯಾವ ರಾಜ್ಯ ಕೊನೆ ಸ್ಥಾನ..?

---Advertisement---

ನವದೆಹಲಿ; 2025ನೇ ಸಾಲಿನ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಯಾವುದೇ ಪರೀಕ್ಷೆಯಲ್ಲಾದರೂ ಸಹಜವಾಗಿಯೇ ವಿದ್ಯಾರ್ಥಿನಿಯರೂ ಫಲಿತಾಂಶದಲ್ಲಿ ಮುಂದೆ ಬರುತ್ತಾರೆ. ಅದೇ ರೀತಿ ಈ ಬಾರಿಯೂ ಪಾಸ್ ಆಗಿದ್ದಾರೆ. ಶೇಕಡಾ 91ರಷ್ಟು ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶೇಕಡಾ 88.39ರಷ್ಟು ಮಕ್ಕಳು ಪಾಸ್ ಆಗಿದ್ದಾರೆ.

ಕಳೆದ ಬಾರಿ ಬಂದ ಫಲಿತಾಂಶಕ್ಕಿಂತ ಈ ಬಾರಿ ಬಂದ ಫಲಿತಾಂಶ ಸ್ವಲ್ಪ ಹೆಚ್ಚಳವಾಗಿದೆ. ಬಾಲಕಿಯರ ಉತ್ತೀರ್ಣ ಪ್ರಮಾಣ ಶೇಕಡಾ 91.64 ಇದ್ದರೆ ಬಾಲಕರ ಉತ್ತೀರ್ಣ ಪ್ರಮಾಣ ಶೇಜಡ 85.70ರಷ್ಟಿದೆ. 12ನೇ ತರಗತಿಯಲ್ಲಿ ಒಟ್ಟು ಈ ಬಾರಿ 1.11 ಲಕ್ಷ ವಿದ್ಯಾರ್ಥಿಗಳು ಶೇಕಡ 90ಕ್ಕೂ ಹೆಚ್ಚು ಅಂಕವನ್ನು ಗಳಿಸಿದ್ದಾರೆ. 24,867 ವಿದ್ಯಾರ್ಥಿಗಳು ಶೇಕಡ 95ಕ್ಕೂ ಹೆಚ್ಚು ಅಂಕ ಗಳಿಸಿದ್ದಾರೆ. ಈ ಬಾರಿ ಒಟ್ಟು 1.29 ವಿದ್ಯಾರ್ಥಿಗಳ ಪೈಕಿ 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇನ್ನು ಈ ಬಾರಿಯ ಸಿಬಿಎಸ್ಇ ಫಲಿತಾಂಶದಲ್ಲಿ ಶೇಕಡಾ 99.60ರಷ್ಟು ಫಲಿತಾಂಶ ಪಡೆಯುವ ಮೂಲಕ ವಿಜಯವಾಡ ಇಡೀ ದೇಶದಲ್ಲಿಯೇ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಶೇಕಡ 79.53ರಷ್ಟು ಫಲಿತಾಂಶ ಪಡೆದ ಪ್ರಯಾಗ್ ರಾಜ್ ಕೊನೆಯ ಸ್ಥಾನದಲ್ಲಿದೆ. ನಮ್ಮ ಬೆಂಗಳೂರು ಶೇಕಡಾ 95.95 ಫಲಿತಾಂಶ ಪಡೆಯೋ ಮೂಲಕ ನಾಲ್ಕನೇ ಸ್ಥಾನದಲ್ಲಿದೆ. ನಮ್ಮ ಕರ್ನಾಟಕದ ಮಕ್ಕಳು ಕೂಡ ಸಿಬಿಎಸ್ಇ ನಲ್ಲಿ ಒಳ್ಳೆಯ ಅಂಕಗಳನ್ನ ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ. ಒಳ್ಳೆಯ ಅಂಕ ತೆಗೆದ ಮಕ್ಕಳಿಗೆ ಎಲ್ಲರೂ ಶುಭ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...