ಸುದ್ದಿಒನ್, ಚಿತ್ರದುರ್ಗ, ಮೇ. 14 : ಇತ್ತೀಚಿನ ದಿನಗಳಲ್ಲಿ ಉತ್ತಮವಾದ ಆಹಾರ ಕ್ರಮಗಳನ್ನು ಅನುಸರಿಸುವುದನ್ನು ಜನ ಮರೆತಿದ್ದಾರೆ. ಉತ್ತಮ ಚಟುವಟಿಕೆಯುಳ್ಳ ಜೀವನ ಶೈಲಿಯನ್ನು ರೂಡಿಸಿಕೊಂಡಿರುವುದಿಲ್ಲ ಇವೆಲ್ಲವುಗಳ ವ್ಯತ್ಯಾಸದಿಂದ ಮಧುಮೇಹ, ರಕ್ತದೊತ್ತಡದಂತಹ ಖಾಯಿಲೆಗಳು ಹೆಚ್ಚಾಗುತ್ತಿದ್ದು ಇಂತಹ ಖಾಯಿಲೆಗಳಿಂದ, ಅಕ್ಷಿಪಟಲದ ತೊಂದರೆಯಿಂದ ದೃಷ್ಠಿದೋಷಗಳು,ಅಂಧತ್ವ
ಹೆಚ್ಚಾಗುತ್ತಿರುವುದರ ಬಗ್ಗೆ ಜಿಲ್ಲಾ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಪ್ರದೀಪ್ ಬಿ.ಜಿ. ಆತಂಕ ವ್ಯಕ್ತಪಡಿಸಿದರು.
ನಗರದ ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಚಿತ್ರದುರ್ಗ, ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ, ಇವರುಗಳ ಸಂಯುಕ್ತಾಶ್ರಯದಲ್ಲಿ KOF ನಿಗಮದ ಎಲ್ಲಾ ವಿಭಾಗದ ನೌಕರರಿಗೆ ಉಚಿತ ನೇತ್ರ ತಪಾಸಣೆ ಹಾಗೂ ರಕ್ತದೊತ್ತಡ, ಮಧುಮೇಹ ಪರೀಕ್ಷೆ ನಡೆಸಲಾಯಿತು.
ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,
ಸಾಮಾನ್ಯವಾಗಿ ಹಿಂದೆ ಕನ್ನಡಕ ಬರುತ್ತಿದುದು ನಲವತ್ತು ವಯಸ್ಸಿನ ಮೇಲೆ ಇರುತ್ತಿತ್ತು ಹಾಗಾಗಿ ಅದನ್ನು ಚಾಳೀಸು ಎಂಬುದು ಅಭ್ಯಾಸ, ಆದರೆ ಈಗ ಯಾವ ವಯಸ್ಸಿಗಾದರೂ ಬರಬಹುದು. ಉತ್ತಮ ಪೋಶಕಾಂಶಗಳುಳ್ಳ ತರಕಾರಿಗಳನ್ನು ವಿಟಮಿನ್ ಎ ಅಂಶ ಉಳ್ಳ ಹಣ್ಣುಗಳನ್ನು ತರಕಾರಿಗಳನ್ನು ಸೇವಿಸಿ ಉತ್ತಮ ದೃಷ್ಠಿ ಹೊಂದಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ ಮಾತನಾಡಿ ಇತ್ತೀಚಿನ ದಿನದಲ್ಲಿ ಮಧುಮೇಹ ಬರುವ ಲಕ್ಷಣಗಳಲು ಹೆಚ್ಚಾಗಿವೆ. ಎಲ್ಲಾ ರೀತಿಯ ಧಾನ್ಯಗಳನ್ನು ಸಿರಿಧಾನ್ಯಗಳನ್ನು ದ್ವಿದಳ ಧಾನ್ಯಗಳನ್ನು ಮೊಳಕೆ ಕಾಳುಗಳಿಂದ ತಯಾರಿಸುವ ಆಹಾರ ಪದಾರ್ಥಗಳನ್ನು ಬಳಸುವುದು ಹಾಗೂ ಉತ್ತಮ ದೈಹಿಕ ಚಟುವಟಿಕೆಗಳಾದ ಯೋಗ ಧ್ಯಾನ ,ವ್ಯಾಯಾಮ ವಾಕಿಂಗ್ ಮಾಡುವುದರೊಂದಿಗೆ ಉತ್ತಮ ಆರೋಗ್ಯ ಹೊಂದಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ KOF ವ್ಯವಸ್ತಾಪಕ ನಿರ್ದೇಶಕರಾದ ಡಾ. ಜೈಕೃಷ್ಣ , ಡಾ ಐಶ್ವರ್ಯ, ಜಿಲ್ಲಾ ಆಸ್ಪತ್ರೆಯ ನೇತ್ರಧಿಕಾರಿ ಕೆ. ಸಿ. ರಾಮು, ಐಸಿಟಿಸಿ ವಿಭಾಗದ ನಾಗರಾಜ್, ಲೋಕೇಶ್, ಶುಶೃಷಧಿಕಾರಿ ಸ್ವಾತಿ, ಜಿಲ್ಲಾಸ್ಪತ್ರೆಯ ನೇತ್ರ ವಿಭಾಗದ ನೇಹಾ, ಗೀತಾ, ಅನಿಲ್ ಮತ್ತಿತರು ಉಪಸ್ಥಿತರಿದ್ದರು.



















