Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ತಂದೆ ಪ್ರತ್ಯಕ್ಷ, ಹಲವು ಆರೋಪ ; ಮದುಮಗಳು ಕೊಟ್ಟ ಕ್ಲಾರಿಟಿ ಏನು..?

---Advertisement---

ಚೈತ್ರಾ ಕುಂದಾಪುರ ಇತ್ತೀಚೆಗಷ್ಟೇ ಮದುವೆಯಾಗಿದ್ದಾರೆ. ಪ್ರೀತಿಸಿದ ಹುಡುಗನ ಜೊತೆಗೆ ದಾಂಪತ್ಯದ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯಲ್ಲಿ ಅದ್ದೂರಿಯಾಗಿ, ಸಾಂಪ್ರದಾಯಿಕವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಈ ಮದುವೆಯಲ್ಲಿ ಕಾಣಿಸಿಕೊಳ್ಳದ ಚೈತ್ರಾ ತಂದೆ ಈಗ ಕಾಣಿಸಿಕೊಂಡಿದ್ದಾರೆ. ಮಗಳು, ಅಳಿಯನ ಮೇಲೆ ಹಲವು ಆರೋಪಗಳನ್ನು ಮಾಡಿದ್ದಾರೆ.

ಬಾಲಕೃಷ್ಣ ನಾಯ್ಕ್ ಮಾತನಾಡಿ, ಆಕೆ ನನ್ನನ್ನ ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನ ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಗಂಡ ಇಬ್ಬರು ಕಳ್ಳರೆ. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡ್ತಾ ಇದ್ದಾರೆ. ಗೋವಿಂದ ಪೂಜಾರಿ ಪ್ರಕರಣದಲ್ಲಿಯೂ ಇವರೆಲ್ಲ ಹಣವನ್ನ ಹಂಚಿಕೊಂಡಿದ್ದಾರೆ. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ ಎಂದು ಚೈತ್ರಾ ಹಾಗೂ ಆಕೆಯ ಗಂಡನ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ತಂದೆಯ ಆರೋಪದ ಬಗ್ಗೆ ಚೈತ್ರಾ ಕುಂದಾಪುರ ಕೂಡ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕುಡುಕ ತಂದೆಯ ಚಿತ್ರಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾರ್ಟರ್ ಕೊಟ್ಟರೆ ನನ್ನ ಮಕ್ಕಳು ದೇವರು ಎಂಬುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರು ಎಂದು ಹೇಳಿದ್ದಾರೆ. ಚೈತ್ರಾ ಹಾಗೂ ತಂದೆಯ ಮನೆಯೊಳಗಿನ ಮನಸ್ತಾಪ ಇದೀಗ ಬೀದಿಗೆ ಬಂದಿದೆ. ಮಗಳ ಮದುವೆಯಾದೊಡನೆ ಮಾಧ್ಯಮದವರ ಮುಂದೆ ಬಂದ ತಂದೆ ಈಗ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment