Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ – ಸಿದ್ದರಾಮಯ್ಯ ಸಂಬಂಧ ಚೆನ್ನಾಗಿಲ್ಲ ಎಂಬುದಕ್ಕೆ ಆರ್.ಅಶೋಕ್ ಅವರು ನೀಡಿದ ಸಾಕ್ಷಿ ಏನು..?

---Advertisement---

ಬೆಂಗಳೂರು; ಡಿಸಿಎಂ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬ ನಿನ್ನೆಯಷ್ಟೇ ನೆರವೇರಿದೆ. ಆದರೆ ದೇಶದಲ್ಲಿ ಯೋಧರು ಯುದ್ಧ ಮಾಡ್ತಾ ಇರುವಾಗ ನಾನು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಅಂತ ಡಿಕೆ ಶಿವಕುಮಾರ್ ಅವರು ಹುಟ್ಟುಹಬ್ಬ ಆಚರಿಸಿಕೊಂಡಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮದೆ ನಾಯಕನ ಹುಟ್ಟುಹಬ್ಬಕ್ಕೆ ಸೌಜನ್ಯಕ್ಕಾದರೂ ಶುಭ ಕೋರಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ನಡುವಿನ ಸಂಬಂಧ ಚೆನ್ನಾಗಿಲ್ಲ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿರುವ ವಿಚಾರ. ಆದರೆ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಸಿದ್ದರಾಮಯ್ಯನವರು ಕನಿಷ್ಠ ಪಕ್ಷ ಒಂದು ಟ್ವೀಟ್ ಕೂಡ ಮಾಡದಷ್ಟು ಹದಗೆಟ್ಟಿದೆ ಎಂದು ಗೊತ್ತಿರಲಿಲ್ಲ‌. ಒಬ್ಬರ ಮುಖ ಒಬ್ಬರು ನೋಡಲಾಗದ ಈ ನಾಯಕರು ರಾಜ್ಯವನ್ನು ಹೇಗೆ ಮುನ್ನಡೆಸುತ್ತಾರೆ..? ಕನ್ನಡಿಗರು ಕಾಂಗ್ರೆಸ್ ಸರ್ಕಾರದಿಂದ ಇನ್ನೇನು ನಿರೀಕ್ಷೆ ಮಾಡುವುದಕ್ಕೆ ಸಾಧ್ಯ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ.

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರಯ ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಸಂದರ್ಭವಿದು. ಹೀಗಾಗಿ ಮೇ 15ರಂದು ಯಾರೂ ನನ್ನ ಜನ್ಮ ದಿನದಿನವನ್ನು ಆಚರಣೆ ಮಾಡುವುದು ಬೇಡ ಎಂದು ಡಿಕೆಶಿ ಮನವಿ ಮಾಡಿದ್ದರು. ಯಾರೂ ಜಾಹೀರಾತು ನೀಡಬೇಡಿ, ಫ್ಲೆಕ್ಸ್, ಬ್ಯಾನರ್ ಹಾಕಬೇಡಿ ಎಂದು‌ ಮನವಿಯನ್ನು ಮಾಡಿಕೊಂಡಿದ್ದರು. ಮನೆಯ ಬಳಿಯೂ ಯಾರೂ ಬರಬೇಡಿ. ನಾನು ಬೆಂಗಳೂರಿನಲ್ಲಿ ಇರೋದಿಲ್ಲ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯ ಅವರು ವಿಶ್ ಮಾಡದೆ ಇರುವ ಬಗ್ಗೆ ಆರ್.ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment