ಸುದ್ದಿಒನ್, ಚಿತ್ರದುರ್ಗ, ಮೇ. 17 : ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 9 : 30 ರ ವೇಳೆಗೆ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಮೃತರನ್ನು ಕಾವ್ಯ (24 ವರ್ಷ), ಗಂಗಮ್ಮ (50 ವರ್ಷ), ಹನ್ಸಿಕಾ (4 ವರ್ಷ) ಮತ್ತು ಮನಸ್ವಿನಿ (2 ವರ್ಷ) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಯಶವಂತ (33 ವರ್ಷ) ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಅರೇಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು SP ರಂಜಿತ್ ಕುಮಾರ್ ಬಂಡಾರು ಅವರು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











