Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬಜೆಟ್ ನಲ್ಲಿ ಹೇಳಿದಂತೆ ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್

---Advertisement---

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ಕಿಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದನ್ನ ನೀಡಿದ್ದಾರೆ‌. ಗೌರವ ಧನ ಹೆಚ್ಚಿಸುವುದಾಗಿ ಅಂದು ಹೇಳಿದ್ದರು. ಇದೀಗ ಕೊಟ್ಟ ಮಾತಿನಂತೆಯೇ ನಡೆದುಕೊಂಡಿದ್ದಾರೆ. ಗೌರವ ಧನ ಹೆಚ್ಚಿಸಿ, ಅಧಿಕೃತ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 100 ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ 2500 ಜನಸಂಖ್ಯೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು. ಒದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41,000 ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸಮಾನವಾಗಿ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಶಾ ಕಾರ್ಯಕರ್ತರಯರಿಗೆ ಮಾಸಿಕವಾಗಿ 1000 ರೂಪಾಯಿಯಂತೆ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ.

2025-26ನೇ ಸಾಲಿನ ಆಯವ್ಯಯದ ಕಂಡಿಕೆ 148 ರ ಘೋಷಣೆಯನ್ವಯ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೂ. 1000/- ಗಳ ( ಒಂದು ಸಾವಿರ ರೂಪಾಯಿಗಳು) ತಂಡ ಆಧಾರಿತ ಪ್ರೋತ್ಸಾಹ ಧನವನ್ನು ಪಾವತಿಸಲು ಹಾಗೂ ಇದಕ್ಕಾಗಿ ತಗಲುವ ವೆಚ್ಚ ರೂ.1800.48 2211-00-103-0-11-324 ಲಕ್ಷಗಳನ್ನು ರಣ ಒದಗಿಸಲಾದ 0.2500.00 ಲಕ್ಷಗಳ ಅನುದಾನದಲ್ಲಿ ಭರಿಸಲು ಅನುಮೋದನೆ ನೀಡಲಾಗಿದೆ. ಗೌರವ ಧನ ಹೆಚ್ಚಳ ಮಾಡಿದ್ದು ಆಶಾ ಕಾರ್ಯಕರ್ತೆಯರ ಸಂತಸಕ್ಕೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...