ಚಿತ್ರದುರ್ಗ. ಮೇ.19 : ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚಿತ್ರದುರ್ಗ ನಗರದ ಸಂತೆ ಮೈದಾನದ ಹತ್ತಿರ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಬುಧವಾರ ದಾಳಿ ಮಾಡಿ ದಂಡ ವಿಧಿಸಿದೆ.
ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ ತಂಬಾಕು ಕಾರ್ಯಾಚರಣೆ ನಡೆಸಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು. ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್ಗಳನ್ನು ಹಾಕಲು ಸೂಚಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 29 ಕೇಸುಗಳನ್ನು ದಾಖಲಿಸಿ ರೂ. 3250 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 06 ಕೇಸುಗಳನ್ನು ದಾಖಲಿಸಿ ರೂ. 750 ದಂಡವನ್ನು ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೆಂಕಟೇಶ್, ಎಂ.ಹೆಚ್.ಮಂಜುನಾಥ, ತಾಲ್ಲೂಕು ಆರೋಗ್ಯಾಧಿಕಾಧಿಕಾರಿಗಳ ಕಚೇರಿ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಪ್ರವೀಣ್ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











