ಸುದ್ದಿಒನ್, ಹೊಸದುರ್ಗ, ಮೇ. 19 : ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಓಂಕಾರಪ್ಪ ವೈಯುಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸದುರ್ಗ ತಾಲ್ಲೂಕು ಆಜೀವ ಸದಸ್ಯರ ಸಮಾಲೋಚನ ಸಭೆಯನ್ನು ದಿನಾಂಕ 21.05.2025 ರಂದು ಬುಧವಾರ ಸಂಜೆ 5 ಗಂಟೆಗೆ ಕನ್ನಡ ಭವನದಲ್ಲಿ ಕರೆಯಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ವಿನಂತಿಸಿದ್ದಾರೆ.











