ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಕೆಟಿನ್ ರಿಲೀಸ್ ಮಾಡಿದ್ದು, ಅದರಲ್ಲಿ ಕಳೆದ 24 ಗಂಟೆಯಲ್ಲಿ 222 ಜನಕ್ಕೆ ಕೊರೊನಾ ಸೋಂಕು ತಗುಲಿದೆ.
ಅದರಲ್ಲಿ 11039 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 76430 RTPCR ಟೆಸ್ಟ್ ಸೇರಿದಂತೆ ಒಟ್ಟು 87469 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 222 ಜನಕ್ಕೆ ಸೋಂಕು ದೃಢಪಟ್ಟಿದೆ.146 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾದಿಂದ ಗುಣಮುಖರಾಗಿ 286 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ರೆ, ಇಬ್ಬರು ಕೊರೊನಾದಿಂದಾಗಿ ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿರುವ ವರದಿ ಪ್ರಕಟವಾಗಿದೆ.