Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಪ್ತನನ್ನು ಕಳೆದುಕೊಂಡ ನಟ ದರ್ಶನ್ : ಹೊನ್ನೇಗೌಡ ನಿಧನಕ್ಕೆ ಸಂತಾಪ..!

---Advertisement---

 

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿನ್ನೆಯಷ್ಟೇ ತಮ್ಮ 22ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನ ಆಚರಿಸಿಕೊಂಡಿದ್ದಾರೆ. ಹೆಂಡತಿ ಜೊತೆಗೆ ಖುಷಿ ಖುಷಿಯಾಗಿ ಸಮಯ ಕಳೆದಿದ್ದಾರೆ. ಅವರ ಅಭಿಮಾನಿಗಳು ಕೂಡ ಮನಸ್ಪೂರ್ತಿಯಾಗಿ ಹಾರೈಸಿದ್ದಾರೆ. ಸದಾ ಕಾಲ ಹೀಗೆ ನಗು ನಗುತ್ತಾ ಇರಿ, ಯಾರ ದೃಷ್ಟಿಯೂ ತಾಗದಿರಲಿ ಎಂದಿದ್ದಾರೆ. ಇದರ ನಡುವೆ ದರ್ಶನ್ ಮನಸ್ಸಿಗೆ ಬೇಸರವಾಗುವಂತ ಘಟನೆ ನಡೆದಿದೆ.

ದರ್ಶನ್ ಆಪ್ತರಾದಂತ ಹೊನ್ನೆಗೌಡ ಅವರು ನಿಧನರಾಗಿದ್ದಾರೆ. ಸುಮಾರು ವರ್ಷಗಳಿಂದ ದರ್ಶನ್ ಅವರ ಜೊತೆಗೆ ಕೆಲಸ ಮಾಡುತ್ತಿದ್ದವರು. ಇದ್ದಕ್ಕಿದ್ದ ಹಾಗೇ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನ ದರ್ಶನ್ ಅವರಿಗುಹ ನೋವು ತರಿಸಿದೆ. ಅವರ ಜೊತೆಗಿನ ಫೋಟೋ ಹಾಕಿ, ಸಂತಾಪ ಸೂಚಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿದ ಕೂಡಲೇ ದರ್ಶನ್ ಅವರ ಅಭಿಮಾನಿಗಳು ಸಹ ಕಮೆಂಟ್ ಮೂಲಕ ಸಂತಾಪವನ್ನ ಸೂಚಿಸಿದ್ದಾರೆ.

’25 ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ’ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ 25 ವರ್ಷಗಳಿಂದ ದರ್ಶನ್ ಅವರಿಗೆ ಪರ್ಸನಲ್ ಮೇಕಪ್ ಮ್ಯಾನ್ ಆಗಿದ್ದವರು. ಅವರ ಸಿನಿಮಾಗಳಿಗೆ ಮೇಕಪ್ ಮಾಡುತ್ತಿದ್ದ ವ್ಯಕ್ತಿ ನಿಧನರಾಗಿದ್ದು, ಆ ನೋವು ದರ್ಶನ್ ಅವರನ್ನು ಕಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment