Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿಯವರ 34ನೇ ಪುಣ್ಯಸ್ಮರಣೆ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 21 : ಸಂಪರ್ಕ ಕ್ರಾಂತಿಯ ಮುಖಾಂತರ ಭಾರತಕ್ಕೆ ತಂತ್ರಜ್ಞಾನದ ಆಧುನಿಕ ಸ್ಪರ್ಶವನ್ನು ಕೊಟ್ಟು, 18 ವರ್ಷಕ್ಕೆ ಮತದಾನದ ಹಕ್ಕನ್ನು ಜಾರಿಗೊಳಿಸಿ, 73 ಮತ್ತು 74ನೇ ಸಂವಿಧಾನಾತ್ಮಕ ತಿದ್ದುಪಡಿಗೆ ಅಡಿಗಲ್ಲು ಹಾಕಿದ ಮೇರು ಚಿಂತಕ ರಾಜೀವ್ ಗಾಂಧಿ ಅವರು ಎಂದು ಡಿಸಿಸಿ ಅಧ್ಯಕ್ಷ ತಾಜ್‍ಪೀರ್ ನುಡಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನ ಮಂತ್ರಿ ದಿ.ರಾಜೀವಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ರಾಜೀವ್ ಗಾಂಧಿ ಅವರು ನಮ್ಮನ್ನಗಲಿ ಇಂದಿಗೆ 34 ವರ್ಷಗಳು ಕಳೆದಿದ್ದರೂ, ಅವರು ದೇಶಕ್ಕೆ ಕೊಟ್ಟಂತಹ ಕೊಡುಗೆಗಳು ಚಿರಸ್ಥಾಯಿಯಾಗಿ ಉಳಿದಿವೆ. ಭಯೋತ್ಪಾದನೆ ಎಂಬುದು ಅಶಾಂತಿ ಮತ್ತು ಅಸ್ಥಿರತೆಯ ಸಂಕೇತ, ಹಾಗಾಗಿ, ರಾಜೀವ್ ಗಾಂಧಿ ಅವರು ಮಡಿದ ದಿನವನ್ನು ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ದಿನ ಎಂದು ಘೋಷಣೆ ಮಾಡಿ, ಭಯೋತ್ಪಾದನೆಯ ವಿರುದ್ದ ಸಮರ ಸಾರಿ ಶಾಂತಿ ಮತ್ತು ಸ್ಥಿರತೆಯನ್ನು ರಾಷ್ಟ್ರದಲ್ಲಿ ನಿರ್ಮಾಣ ಮಾಡುವ ಸಂಕಲ್ಪವನ್ನು ತೊಡಲಾಗಿದೆ ಎಂದರು.

 

ರಾಜೀವ ಗಾಂಧಿಯವರು ತಮ್ಮ ಅಧಿಕಾರದ ಅವದಿಯಲ್ಲಿ ಉತ್ತಮವಾದ ಕಾರ್ಯವನ್ನು ಮಾಡುವುದರ ಮೂಲಕ ದೇಶವನ್ನು ಪ್ರಗತಿಯತ್ತ ಕೊಂಡ್ಯೂದಿದ್ದಾರೆ. ಅವರು ತಾನು ಪ್ರಧಾನಮಂತ್ರಿಯ ಮಗ, ಮೊಮ್ಮಗ ಎಂಬ ಅಹಂ ಇಲ್ಲದೆ ಎಲ್ಲರೊಂದಿಗೆ ಬೇರೆಯುವುದರ ಮೂಲಕ ದೇಶವನ್ನು ಉತ್ತಮ ಸ್ಥಿತಿಗೆ ತೆಗೆದುಕೊಂಡು ಹೋದರು. ಇಂದು ನಾವು ಬಳಸುವ ಕಂಪ್ಯೂಟರ್, ಮೊಬೈಲ್ ಪೋನ್, ತಂತ್ರಜ್ಞಾನ ಎಲ್ಲಾ ರಾಜೀವಗಾಂಧಿಯವರ ಕೊಡುಗೆಯಾಗಿದೆ.ರಾಜಕೀಯವನ್ನು ಬಯಸದ ಅವರು ಪೈಲಂಟ್ ಆಗಿ ತಮ್ಮ ಜೀವನವನ್ನು ನಡೆಸುತ್ತಿದ್ದರು ಅದರೆ ತಾಯಿಯ ಮರಣದ ನಂತರ ಅಕಸ್ಮಿಕವಾಗಿ ರಾಜಕೀಯಕ್ಕೆ ಬಂದರು. ಐಟಿ.ಬಿಟಿ.ಪಂಚಾಯತ್ ರಾಜ್‍ಮಸೂದೆ, ಮಹಿಳೆಯರಿಗೆ ರಾಜಕೀಯವಾಗಿ ಸ್ಥಾನ, ಯುವಜನರಿಗೆ 21 ರಿಂದ 18 ವರ್ಷಕ್ಕೆ ಮತದಾನದ ಹಕ್ಕನ್ನು ನೀಡುವುದು ಸೇರಿದಂತೆ ಹಲವಾರು ಉತ್ತಮವಾದ ಕಾರ್ಯವನ್ನು ಮಾಡಿದ ಕೀರ್ತಿ ಅವರಿಗೆ ಸಲುತ್ತದೆ ಎಂದರು.

 

ಇಂದಿನ ಯುವ ಜನಾಂಗಕ್ಕೆ ಬಿಜೆಪಿ ಸುಳ್ಳನ್ನು ಹೇಳುವುದರ ಮೂಲಕ ಅವರಿಗೆ ಮಂಕುಬೂದಿಯನ್ನು ಎರಚುತ್ತಿದೆ, ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಉತ್ತಮವಾದ ಕಾರ್ಯಗಳಾಗಿವೆ, ಇಂದು ಯುವ ಜನಾಂಗ ಬಳಸುವಂತೆ ವಿವಿಧ ರೀತಿಯ ತಂತ್ರಜ್ಞಾನಕ್ಕೆ ಕಾಂಗ್ರೆಸ್ ಕಾರಣವಾಗಿದೆ ಆದರೆ ಇದನ್ನು ತಿಳಿಸುವಂತ ಕಾರ್ಯವಾಗುತ್ತಿಲ್ಲ ಇದರಿಂದ ಯುವಜನತೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಅವರಿಗೆ ಯಾರು ಯಾವ ಕೆಲಸವನ್ನು ಮಾಡಿದ್ದಾರೆ ಎಂದು ತಿಳಿಸಿ ಜಾಗೃತಿಯನ್ನು ಮೂಡಿಸುವಂತ ಕಾರ್ಯವಾಗಬೇಕಿದೆ ಎಂದು ತಾಜ್ ಪೀರ್ ತಿಳಿಸಿದರು.

 

ಜಿಲ್ಲಾ ಕಾಂಗ್ರೆಸ್‍ನ ಎಸ್.ಟಿ. ಘಟಕದ ಅಧ್ಯಕ್ಷರಾದ ಜಯ್ಯಣ್ಣ ಮಾತನಾಡಿ, ಇಂದು ನಮ್ಮ ದೇಶದ ತಂತ್ರಜ್ಞಾನದಲ್ಲಿ ದಾಪುಗಾಲು ಇಟ್ಟಿದೆ ಎಂದರೆ ಅದಕ್ಕೆ ರಾಜೀವಗಾಂಧಿಯವರು ಕಾರಣರಾಗಿದ್ದಾರೆ. ಅವರ ಅಂದು ಮುಂದುವರೆಯದೇ ಇದಿದ್ದರೆ ನಮ್ಮ ದೇಶ ತಂತ್ರಜ್ಞಾನಕ್ಕಾಗಿ ಬೇರೆ ದೇಶದ ಮುಂದೆ ಕೈಚಾಚಬೇಕಿತ್ತು, ಗಾಂಧಿ ಕುಟುಂಬ ದೇಶಕ್ಕಾಗಿ ಪ್ರಾಣವನ್ನು ತ್ಯಾಗ ಮಾಡಿದ ಕುಟುಂಬವಾಗಿದೆ ಮಹಾತ್ಮಗಾಂಧಿ, ಇಂದಿರಾಗಾಂಧಿ ಹಾಗೂ ರಾಜೀವಗಾಂಧಿಯವರು ಸಹಾ ದೇಶಕ್ಕಾಗಿ ತಮ್ಮ ಪ್ರಾಣವನ್ನೆ ನೀಡಿದ್ದಾರೆ. ಇದರ ಬಗ್ಗೆ ಬಿಜೆಪಿಯವರಿಗಡೆ ಅರಿವು ಇಲ್ಲವಾಗಿದೆ, ಸ್ವಾತಂತ್ರಯದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಎಂದರು.

 

ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಗೀತಾ ನಂದಿನಿ ಗೌಡ ಮಾತನಾಡಿ, ರಾಜೀವಗಾಂಧಿಯವರು ತಮ್ಮ ಅಧಿಕಾರದ್ದಾಗ ದೇಶದ ಕಟ್ಟ ಕಡೆಯ ವ್ಯಕ್ತಿಯೂ ಸಹಾ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡುವುದು ಅವರ ಉದ್ದೇಶವಾಗಿತ್ತು. ಉದ್ಯೋಗಖಾತ್ರಿಯನ್ನು ಜಾರಿ ಮಾಡುವುದರ ಮೂಲಕ ಗ್ರಾಮಾಂತರ ಪ್ರದೇಶದ ಜನರಿಗೆ ಬದುಕಿಗೆ ಆಸರೆಯಾದರು. 33% ಮೀಸಲಾತಿಯನ್ನು ಜಾರಿ ಮಾಡುವುದರ ಮೂಲಕ ಮಹಿಳೆಯರು ರಾಜಕೀಯಕ್ಕೆ ಬರಲು ನೆರವಾದವರು ರಾಜೀವಗಾಂಧಿಯವರು ಎಂದು ತಿಳಿಸಿದರು.

 

ಕಾರ್ಯಕ್ರಮದಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮೈಲಾರಪ್ಪ,ಎಸ್.ಸಿ, ಘಟಕದ ಅಧ್ಯಕ್ಷರಾದ ಮಂಜುನಾಥ್, ಉಪಾಧ್ಯಕ್ಷರಾಧ ರವಿಕುಮಾರ್, ಸೇವಾದಳದ ಅಧ್ಯಕ್ಷರಾದ ಭೀಮರಾಜ್, ಸಾಧೀಕ್‍ವುಲ್ಲಾ, ಮುದಸಿರ್ ನವಾಜ್, ಪ್ರಕಾಶ್, ನಾಗೇಂದ್ರಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

 

 

 

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment