Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೋಲ್ಡ್ ಸ್ಮಗ್ಲರ್ ರನ್ಯಾ ರಾವ್ ಗೂ ಸಚಿವ ಪರಮೇಶ್ವರ್ ಅವರ ಸಿದ್ದಾರ್ಥ ಕಾಲೇಜಿಗೂ ನಂಟು : ಏನಿದು ಬಿಜೆಪಿ, ಜೆಡಿಎಸ್ ಆರೋಪ..?

---Advertisement---

ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಕಂಬಿ ಎಣಿಸ್ತಾ ಇರೋದು ಎಲ್ಲರಿಗೂ ಗೊತ್ತೆ ಇದೆ. ತನಿಖೆ ಕೂಡ ನಡೆಯುತ್ತಲೇ ಇದೆ. ಅದರ ಭಾಗವಾಗಿಯೇ ಇಂದು ಇಡಿ ಅಧಿಕಾರಿಗಳು ಗೃಹ ಸಚಿವ ಜಿ ಪರಮೇಶ್ವರ್ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯನ್ನ ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಉದ್ದೇಶ ಪೂರ್ವಕವಾಗಿದ್ದು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಇದೀಗ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಟ್ವೀಟ್ ಮಾಡಿದ್ದಾರೆ.

 

ಗೃಹ ಸಚಿವ @DrParameshwara ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ತಂಡ ದಾಳಿ ಮಾಡಿದೆ. ನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರ ಪಾತ್ರವೂ ಇರುವುದು ಇಡಿ ದಾಳಿಯಿಂದ ಬಯಲಾಗುತ್ತಿದೆ. ಚಿನ್ನ ಕಳ್ಳಸಾಗಣೆ ಮಾಡಿ ಸಿಕ್ಕಿಬಿದ್ದ ನಟಿ ರನ್ಯಾ​ಗೂ, ಗೃಹ ಸಚಿವರ ಸಿದ್ಧಾರ್ಥ ಕಾಲೇಜಿನ ನಡುವೆ ಅಕ್ರಮವಾಗಿ ಹಣಕಾಸಿನ ವರ್ಗಾವಣೆ ನಡೆದಿದೆ. ರನ್ಯಾ ಗೋಲ್ಡ್‌ ಸ್ಮಗ್ಲಿಂಗ್‌ ಮಾಡಿಗಳಿಸಿರುವ ಹಣದ ಹೂಡಿಕೆಗಳ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಜೆಡಿಸರ್ ಟ್ವೀಟ್ ಮಾಡಿದೆ.

ಕರ್ನಾಟಕದ ಭ್ರಷ್ಟ @INCKarnataka ಸರ್ಕಾರದ ಕಲೆಕ್ಷನ್‌ ಏಜೆಂಟ್‌ @rssurjewal ಅವರೆ, ಅದು ಶಿಕ್ಷಣ ಸಂಸ್ಥೆಯ ಮೇಲಿನ ದಾಳಿ ಅಲ್ಲ, ಅದು ಗೋಲ್ಡ್‌ ಸ್ಮಗ್ಲರ್‌ ರನ್ಯಾ ರಾವ್‌ ಶಿಕ್ಷಣ ಸಂಸ್ಥೆಯಲ್ಲಿ ಎಷ್ಟು ಹೂಡಿಕೆ ಮಾಡಿದ್ದಾರೆ ಎಂಬುದನ್ನು ತಿಳಿಯಲು ಮಾಡಿರುವ ದಾಳಿ ಇರಬಹುದು ಎಂದು ಮಾಧ್ಯಮಗಳು ವರದಿ ಮಾಡಿವೆ. ನಿಮಗೆ ನಿಜಕ್ಕೂ @DrParameshwara ಅವರ ಮೇಲೆ ಪ್ರೀತಿ,ಮಮತೆ, ಕಾಳಜಿಯಿದ್ದರೆ ಅವರನ್ನು 2013ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಸೋಲಿಸಿದ @siddaramaiah ಅವರನ್ನು ಕೂಡಲೇ ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment