Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರಿಯಾಂಕ್ ಖರ್ಗೆ ಹೆಸರನ್ನ ವಾಪಾಸ್ ಪಡೆದುಕೊಂಡಿದ್ದೇನೆ : ಛಲವಾದಿ ನಾರಾಯಣಸ್ವಾಮಿ

---Advertisement---

ಕಲಬುರಗಿ; ಇತ್ತೀಚೆಗೆ ಛಲವಾದಿ ನಾರಾಯಣಸ್ವಾಮಿ ಆಡಿದ ಮಾತು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ತೆಗೆದುಕೊಂಡು ಅವಹೇಳನ ಮಾಡಿದ್ದರು. ಅದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ತಮ್ಮ ಮಾತನ್ನ ಛಲವಾದಿ ನಾರಾಯಣಸ್ವಾಮಿ ವಾಪಾಸ್ ಪಡೆದುಕೊಂಡಿದ್ದಾರೆ. ವಿಷಾಧ ವ್ಯಕ್ತ ಪಡಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಹೇಳಿರುವ ಕಾರಣ ಆ ಹೆಸರನ್ನ ಹಿಂಪಡೆದುಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿ ಅವರು, ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ತೆಗೆದುಕೊಂಡು ಹೇಳಬಾರದಿತ್ತು. ಆ ಹೆಸರನ್ನು ಹಿಂಪಡೆದುಕೊಳ್ಳುತ್ತಿದ್ದೇನೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಆ ಹೆಸರನ್ನ ಹಿಂತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಹೀಗಾಗಿ ಪ್ರಿಯಾಂಕ್ ಖರ್ಗೆ ಹೆಸರನ್ನ ಹಿಂಪಡೆದುಕೊಳ್ಳುತ್ತಿದ್ದೇನೆ. ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಪ್ರಧಾನ ಮಂತ್ರಿಗಳನ್ನು ಯಾರೂ ಕೂಡ ನಿಂದಿಸಬಾರದು. ದೇಶಕ್ಕೆ ಅತಿ ಮುಖ್ಯವಾದವರು ಪ್ರಧಾನಿ. ಅವರ ಬಗ್ಗೆ ಯಾರೂ ಕೆಟ್ಟದಾಗಿ ಮಾತನಾಡುತ್ತಾರೋ ಅವರಿಗೆ ಹೇಳಿದ್ದು ಅಂತ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾ್ಇ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಛಲವಾದಿ ನಾರಾಯಣ ಸ್ವಾಮಿ ಅವರು ಟೀಕಿಸೋ ಭರದಲ್ಲಿ ಪ್ರಿಯಾಂಕ್ ಖರ್ಗೆ ಹೆಸರನ್ನ ತೆಗೆದುಕೊಂಡಿದ್ದರು. ಶ್ವಾನಕ್ಕೆ ಹೋಲಿಕೆ ಮಾಡಿದ್ದರು. ಇದನ್ನ ಖಂಡಿಸಿದ ಪ್ರಿಯಾಂಕ್ ಖರ್ಗೆ ಬೆಂಬಲಿಗರು, ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆಯನ್ನು ಮಾಡಿದ್ದರು. ನಾರಾಯಣ ಸ್ವಾಮಿ ಕಾರಿನ ಮೇಲೆ ಬಣ್ಣ ಎರಚಿ ಆಕ್ರೋಶ ಹೊರ ಹಾಕಿದ್ದರು‌. ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಇದೀಗ ದೊಡ್ಡವರ ಮಾತನ್ನ ಕೇಳಿದ್ದಾರೆ‌. ಆ ಮಾತಿಂದ ಪ್ರಿಯಾಂಕ್ ಖರ್ಗೆ ಅವರಿಗೆ ನೋವಾಗಿದ್ರೆ ವಿಷಾದಿಸುತ್ತೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...