Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದಿನ 5 ದಿನ ರಾಜ್ಯದಲ್ಲಿ ಜೋರು ಮಳೆ : ಹವಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು..?

---Advertisement---

ಬೆಂಗಳೂರು: ರಾಜ್ಯದಲ್ಲಿ ಕಳೆದ ವಾರದಿಂದ ಮಳೆ ನಿರಂತರವಾಗಿ ಬರ್ತಾ ಇದೆ. ಇದರಿಂದ ಕೃಷಿ ಕೆಲಸಗಳಿಗೆ ಚಾಲನೆ ಸಿಕ್ಕಂತಾಗಿದೆ. ರೈತರು ನಗುಮುಖದಿಂದ ಹೊಲಗಳತ್ತ ಮುಖ ಮಾಡಿದ್ದಾರೆ. ಈ ಬಾರಿ ಒಳ್ಳೆಯ ಮಳೆಯಾಗಲಿದೆ ಎಂದು ಈಗಾಗಲೇ ತಿಳಿದವರು ಭವಿಷ್ಯವನ್ನು ನುಡಿದಿ ಆಗಿದೆ. ಹೀಗಾಗಿ ಭರವಸೆಯೊಂದಿಗೆ ಕೃಷಿ ಚಟುವಟಿಕೆಯಲ್ಲಿ ರೈತರು ಆಕ್ಟೀವ್ ಆಗಿದ್ದಾರೆ. ಇದರ ನಡುವೆ ರಾಜ್ಯದಲ್ಲಿ ಇನ್ನು ಎಷ್ಟು ದಿನ ಮಳೆ ಮುಂದುವರೆಯಲಿದೆ ಎಂಬುದರ ಬಗ್ಗೆ ಹವಮಾನ ಇಲಾಖೆ ಮಾಹಿತಿಯನ್ನ ನೀಡಿದೆ.

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆರಾಯನ ಆರ್ಭಟ ಮುಂದಿವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮೇ 27ರ ತನಕ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ತಿಳಿಸಿದೆ. ಇದರ ನಡುವೆ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಸೂಚನೆ ನೀಡಿದೆ. ಇದರಿಂದ ಸಿಲಿಕಾನ್ ಸಿಟಿ ಮಂದಿಗೆ ನಿರಾಳ ಎನಿಸಿದೆ. ಯಾಕಂದ್ರೆ ಕಳೆದ ಕೆಲವೇ ಕೆಲವು ದಿನಗಳಿಂದ ಸುರಿದ ಸಣ್ಣ ಮಳೆಗೆ ಬೆಂಗಳೂರು ಕೆರೆಯಂತಾಗಿದೆ. ಬೋಟ್ ನಲ್ಲಿ ಜನ ಸಂಚಾರ ಮಾಡುವಂತಾಗಿದೆ. ಹಾವುಗಳ ಕಾಟಕ್ಕೆ ನೀರಿನಲ್ಲಿ ಕಾಲಿಡೋದಕ್ಕೂ ಜನ ಹೆದರುತ್ತಿದ್ದಾರೆ. ಈಗ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಕಡಿಮೆ ಎಂದಿದ್ದಕ್ಕೆ ಕೊಂಚ ಸಮಾಧಾನವಾಗಿದ್ದಾರೆ.

ಉಳಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment