ಮೈಸೂರ್ ಸ್ಯಾಂಡಲ್ ಸೋಪ್ ರಾಯಭಾರಿ ವಿವಾದ : ಸಚಿವ ಎಂಬಿ ಪಾಟೀಲ್ ಹೇಳಿದ್ದೇನು..?

suddionenews
1 Min Read

ಬೆಂಗಳೂರು: ಮಿಲ್ಕಿ ಬ್ಯೂಟಿ ಎಂದೆದ ಖ್ಯಾತಿ ಪಡೆದಿರುವ ನಟಿ ತಮನ್ನಾ ಅವರನ್ನ ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯನ್ನಾಗಿ ಸರ್ಕಾರ ನೇಮಕ ಮಾಡಿದೆ. ಇದನ್ನ ಕನ್ನಡಿಗರು ಖಂಡಿಸಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವ ಎಂಬಿ ಪಾಟೀಲ್, ನಮ್ಮ ನಾಡಿನ ಹೆಮ್ಮೆಯ ಸೋಪ್ ಬ್ರಾಂಡ್ ಆಗಿರುವ ಮೈಸೂರು ಸ್ಯಾಂಡಲ್ ಸೋಪ್ ಅನ್ನ ಜಾಗತಿಕ ಮಟ್ಟದಲ್ಲಿ ಒಂದು ಬ್ರ್ಯಾಂಡ್ ಆಗಿ ಮಾಡುವ ಇಚ್ಛಾಶಕ್ತಿಯನ್ನು ಹೊಂದಲಾಗಿದೆ. ಈ ಹಿನ್ನೆಲೆಯಲ್ಲಿ ತಮನ್ನಾ ಅವರನ್ನ ಬ್ರ್ಯಾಂಡ್ ಆಗಿ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.

ಅವರ ಆಯ್ಕೆ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ತಹ್ಞರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ತಮನ್ನಾ ಅವರನ್ನೇ ಬ್ರಾಂಡ್ ಅಂಬಾಸಿಡರ್ ಮಾಡುವುದಕ್ಕೆ ಒಂದಷ್ಟು ಕಾರಣಗಳನ್ನು ನೀಡಿದ್ದಾರೆ. ಸದ್ಯಕ್ಕೆ ಮೈಸೂರು ಸ್ಯಾಂಡಲ್ ಸೋಪನ್ನು ನಮ್ಮ ರಾಜ್ಯ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟಕ್ಕೆ ಮಾರುಕಟ್ಟೆ ವಿಸ್ತರಣೆ ಮಾಡುವ ದೃಷ್ಟಿಯಿಂದ ತಮನ್ನಾ ಅವರನ್ನಹ ಆಯ್ಕೆ ಮಾಡಲಾಗಿದೆ. ಹಾಗೇ ಅವರ ಆಯ್ಕೆಗೆ ನಾಲ್ಕು ಪ್ರಮುಖ ಕಾರಣಗಳಿವೆ ಎಂದು ಹೇಳಿರುವ ಸಚಿವರು ಆಯ್ಕೆ ಹಿಂದಿನ ಕಾರಣಗಳನ್ನು ತಿಳಿಸಿದ್ದಾರೆ.

* ಮೊದಲಿಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಮಿಲಿಯನ್ ಗಟ್ಟಲೇ ಫಾಲೋವರ್ಸ್ ಇದ್ದಾರೆ‌. ಹೀಗಾಗಿ ಬ್ರಾಂಡ್ ಜನರುಗೆ ಈಸಿಯಾಗಿ ತಲುಪುತ್ತೆ ಎಂಬ ಉದ್ದೇ. ಜೊತೆಗೆ ತಮನ್ನಾ ಸಿಕ್ಕಾಪಟ್ಟೆ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅವರನ್ನು ಫಾಲೋ ಮಾಡುವವರ ಮೇಲೂ ಈ ಜಾಹೀರಾತು ಪ್ರಭಾವ ಬೀರುತ್ತದೆ. ಹೀಗೆ ಈಗಿನ ಟ್ರೆಂಡ್ ಗೆ ಬೇಕಾದ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ತಮನ್ನಾ ಅವರನ್ನ ಆಯ್ಕೆ ಮಾಡಿಕೊಂಡಿರುವುದಾಗಿ ಸಚಿವರು ಸ್ಪಷ್ಟನೆ ನೀಡಿದ್ದಾರೆ‌.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks