ನವದೆಹಲಿ; ಬಹಳಷ್ಟು ಚರ್ಚೆಗೆ ಗ್ರಾಸವಾಗಿರುವಂತ ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಇಷ್ಟು ದಿನದಿಂದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಹೆಸರು ಇತ್ತು. ಈಗ ನೋಡಿದ್ರೆ ಈ ಕೇಸಲ್ಲಿ ಡಿಕೆ ಬ್ರದರ್ಸ್ ಹೆಸರು ತಳುಕು ಹಾಕಿಕೊಂಡಿದೆ. ಯಂಗ್ ಇಂಡಿಯಾ ಲಿಮಿಟೆಡ್ ಡಿಕೆ ಬ್ರದರ್ಸ್ ಬರೋಬ್ಬರಿ 5.80 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಆರೋಪಿಸಿಲಾಗಿದೆ. ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನ ತನ್ನ ಸುಪರ್ದಿಗೆ ತೆಗೆದುಕೊಂಡಿದ್ದ ಯಂಗ್ ಇಂಡಿಯಾ ಲಿಮಿಟೆಡ್ ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನಿರ್ದೇಶಕರಾಗಿದ್ದಾರೆ. ಈ ಯಂಗ್ ಇಂಡಿಯಾ ಲಿಮಿಟೆಡ್ ಗೆ ಡಿಕೆ ಶಿವಕುಮಾರ್, ಡಿಕೆ ಸುರೇಶ್ ಅವರು ದೇಣಿಗೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಂದಲೂ ಯಂಗ್ ಇಂಡಿಯಾ ಲಿಮಿಟೆಡ್ ಗೆ ದೇಣಿಗೆ ನೀಡಲಾಗಿದೆ. ರೇವಂತ್ ರೆಡ್ಡಿ ಅವರು ದೇಣಿಗೆ ನೀಡುವುದಲ್ಲದೆ ಬೇರೆ 4 ನಾಯಕರಿಗೆ 80 ಲಕ್ಷ ರೂಪಾಯಿ ದೇಣಿಗೆ ನೀಡಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು 142 ಕೋಟಿ ರೂಪಾಯಿ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.
ಯಂಗ್ ಇಂಡಿಯಾ ಲಿಮಿಟೆಡ್ ಕಂಪನಿಗೆ ತೆಗೆದುಕೊಂಡಿರುವ ದೇಣಿಗೆ ಸದುದ್ದೇಶ ಹೊಂದಿಲ್ಲ ಎನ್ನಲಾಗಿದೆ. ಈ ಎಲ್ಲಾ ಅಂಶಗಳನ್ನು ಇಡಿ ಕೋರ್ಟ್ ಸಲ್ಲಿಸಿರುವ ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ಹೆಸರು ಕೂಡ ಕೇಳಿ ಬಂದಿದೆ. ಈ ವಿಚಾರ ರಾಜ್ಯರಾಜಕಾರಣದಲ್ಲೂ ಚರ್ಚೆಯಾಗ್ತಾ ಇದೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






