Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ 25 ರಂದು ತುರುವನೂರು ಸುತ್ತಮುತ್ತಲಿನ ಈ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಮೇ23: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದು ಮೇ 25ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತುರುವನೂರು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ. ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಐ.ಪಿ. ಮಾರ್ಗಗಳಿಗೆ ಸಮಯ 10 ರ ಒಳಗೆ ವಿದ್ಯುತ್ ಸರಬರಾಜು ಮಾಡಲಾಗುವುದು.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು: 66/11 ಕೆವಿ ತುರುವನೂರು ವಿವಿ ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಎಫ್-5 ತುರುವನೂರು ಎನ್.ಜೆ.ವೈ, ಮತ್ತು ಎಫ್-9 ಪೇಲೂರಹಟ್ಟಿ ಎನ್.ಜೆ.ವೈ ಮಾರ್ಗ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: 66/11 ಕೆವಿ ತುರುವನೂರು ವ್ಯಾಪ್ತಿಯ ತುರುವನೂರು, ಕೂನಬೇವು, ಬೆಳಗಟ್ಟ, ಕಡಬನಕಟ್ಟೆ, ಪೇಲೂರಹಟ್ಟಿ, ಗೋನೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು  ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...