ಸಿಇಟಿ ಪರೀಕ್ಷೆ ಬರೆದು ಮುಂದಿನ ಶಿಕ್ಷಣಕ್ಕಾಗಿ ಕಾಯುತ್ತಿದ್ದವರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯೇ CET ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಮಾಹಿತಿ ನೀಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಂದ ಪ್ರಕಟವಾಗಲಿದೆ.
2025ರ ಸಿಇಟಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ನಾಳೆ ಗುಡ್ ನ್ಯೂಸ್ ಸಿಗಲಿದೆ. ಕಳೆದ ಏಪ್ರಿಲ್ 15, 16 ಮತ್ತು 17ರಂದು ಸಿಇಟಿ ಪರೀಕ್ಷೆಯನ್ನ ನಡೆಸಲಾಗಿತ್ತು. ನಾಳೆ ಬೆಳಗ್ಗೆ 11.30ಕ್ಕೆ UG CET 2025ರ ಫಲಿತಾಂಶವನ್ನ ಪ್ರಕಟಿಸಲಾಗುತ್ತದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನುಅಧಿಕೃತವಾಗಿ ಪ್ರಕಟಿಸಲಾಗುತ್ತದೆ.
ಸಚಿವ ಎಂಸಿ ಸುಧಾಕರ್ ಅವರು ಬೆಳಗ್ಗೆ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ2 ಗಂಟೆಯ ಬಳಿಕ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ನಂತರ ಫಲಿತಾಂಶ ಸಿಗಲಿದೆ. https://cetonline.Karnataka.gov.in/ugcetrank2025/checkresult.aspx https://karresults.nic.in ಈ ವೆಬ್ಸೈಟ್ ನಲ್ಲಿ ಫಲಿತಾಂಶ ನೋಡಬಹುದು.





















