ಬೆಳಗಾವಿ; ಕೋಡಿಮಠದ ಶ್ರೀಗಳು ಆಗಾಗ ದೇಶದ, ರಾಜ್ಯದ ಬಗ್ಗೆ ಭವಿಷ್ಯವನ್ನ ನುಡಿಯುತ್ತಲೇ ಇರುತ್ತಾರೆ. ಅದು ಯಾವಾಗಲೂ ನಿಜವಾಗಿದೆ ಕೂಡ. ಇದೀಗ ಮತ್ತೆ ಭವಿಷ್ಯ ನುಡಿದಿದ್ದಾರೆ. ಮತ್ತೆ ದೇಶಕ್ಕೆ ಯುದ್ಧದ ಭೀತಿ ಬಗ್ಗೆ ಮಾತನಾಡಿದ್ದಾರೆ. ಲೋಕಕ್ಕೆ ಜಲ ಹಾಗೂ ವಾಯು ಗಂಡಾಂತರವಿದೆ ಎಂದು ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಈಗಾಗಲೇ ಅಲ್ಲಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಈ ಸಂಬಂಧ ಈಗಾಗಲೇ ಜನರಿಗೆ ಆತಂಕ ಶುರುವಾಗಿದೆ. ಇದರನಡುವೆ ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಇನ್ನು ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರುವುದು ಒಳ್ಳೆಯದು. ಉಸಿರಾಟದ ತೊಂದರೆಯಾಗಿ ಸಾವು ಸಂಭವಿಸುವ ಸಾಧ್ಯತೆ ಇರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಜೊತೆಗೆ ಯುದ್ಧ ಭೀತಿಯ ಬಗ್ಗೆಯೂ ಮಾತನಾಡಿದ್ದಾರೆ. ಲೋಕಕ್ಕೆ ವಾಯು ಹಾಗೂ ಜಲದಿಂದ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪುವ ಸಾಧ್ಯತೆ ಇದೆ. ಭೂಕಂಪಗಳು ಸಂಭವಿಸಲಿವೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿದಿತ್ತು. ಯುದ್ಧ ಭೀತಿ ಮತ್ತೆ ಆರಂಭವಾಗಲಿದೆ. ಜನರಲ್ಲಿ ಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗಲಿವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಮುಂದಿನ ಸಂಕ್ರಾಂತಿ ತನಕ ರಾಜ್ಯ ರಾಜಕೀಯದಲ್ಲಿ ಯಾವುದೇ ಬದಲಾವಣೆಯಿಲ್ಲ. ಸಂಕ್ರಾಂತಿ ನಂತರ ಏನಾಗುತ್ತೆ ಎಂಬುದನ್ನು ಅಂದಿನತನಕ ಕಾದು ನೋಡಬೇಕಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅದರಲ್ಲೂ ಕೊರೋನಾ ಬಗ್ಗೆ ಹೇಳಿದ ಭವಿಷ್ಯ ಜನರಲ್ಲಿ ಕೊಂಚ ಆತಂಕ ಹೆಚ್ಚಿಸಿದೆ.










