ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು; ಕೊರೊನಾ ಕೇಸ್ ಗಳು ಈಗಾಗಲೇ ರಾಜ್ಯದಲ್ಲಿ ಕಾಣಿಸಿಕೊಳ್ಳುತ್ತಿವೆ ಅನ್ನೋದು ಎಲ್ಲರಿಗೂ ಗೊತ್ತು. ಸರ್ಕಾರವೂ ಕೂಡ ಈ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಎಚ್ಚರದಿಂದ ಇರಲು ಸೂಚನೆ ನೀಡಿದೆ. ಭಯ ಪಡೋದು ಬೇಡ, ಆದರೆ ಜಾಗೃತಿ ಬಹಳ ಮುಖ್ಯವಾದದ್ದು. ಯಾಕಂದ್ರೆ ಮಳೆಗಾಲಕ್ಕೆ, ಚಳಿಗಾಲಕ್ಕೆ ಈ ವೈರಸ್ ಗಳು ಆಕ್ಟಿವ್ ಆಗುತ್ತವೆ, ಹೆಚ್ಚಾಗುತ್ತವೆ. ಇದೀಗ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಂದಾಗಿ ಒಬ್ಬರು ಬಲಿಯಾಗಿದ್ದಾರೆ.
ಬೆಂಗಳೂರಿನ ವೈಟ್ ಫೀಲ್ಡ್ ನಿವಾಸಿ ಸಾವನ್ನಪ್ಪಿರುವುದು ದಾಖಲಾಗಿದೆ. 84 ವರ್ಷದ ವ್ಯಕ್ತಿ ಒಬ್ಬರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದು ಇನ್ನಷ್ಟು ಆತಂಕವನ್ನು ಸೃಷ್ಟಿ ಮಾಡಿದೆ.
ರಾಜ್ಯದಲ್ಲಿ ಸದ್ಯಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ 38 ಇದೆ. ಅದರಲ್ಲಿ ಬೆಂಗಳೂರು ಒಂದರಲ್ಲಿಯೇ 32 ಪ್ರಕರಣಗಳು ದಾಖಲಾಗಿವೆ. ಉಳಿದಂತೆ ಬೇರೆ ಜಿಲ್ಲೆಯಲ್ಲಿ ಅಂದ್ರೆ ಮೈಸೂರಲ್ಲಿ 2 ಹಾಗೂ ವಿಜಯನಗರದಲ್ಲಿ ಒಂದು ಪ್ರಕರಣ ದಾಖಲಾಗಿದೆ. ರಾಜ್ಯಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾದ ಬೆನ್ನಲ್ಲೇ ಜನರನ್ನು ಭೇಟಿ ಮಾಡುವಾಗ ಸಿಎಂ ಸಿದ್ದರಾಮಯ್ಯ ಅವರು ಮಾಸ್ಕ್ ಧರಿಸಿ ಬರುವ ಮೂಲಕ ಎಚ್ಚರಿಸಿದ್ದಾರೆ.
ವೈರಸ್ ಹೆಚ್ಚಾಗುವ ಮೊದಲೇ ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಸರ್ಕಾರ ಕೂಡ ಈಗಾಗಲೇ ಮುಂಜಾಗ್ರತ ಕ್ತಮಗಳತ್ತ ಗಮನ ಹರಿಸಿದೆ. ಆದರೆ ಜನರ ಜವಾಬ್ದಾರಿ ಬಹಳ ಮುಖ್ಯವಾಗುತ್ತದೆ. ಅಂದ್ರೆ ಎಷ್ಡು ಜಾಗೃತಿ ವಹಿಸುತ್ತಾರೋ ಅಷ್ಟು ಮುಖ್ಯವಾಗುತ್ತದೆ. ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಅದಕ್ಕಿಂತ ಹೆಚ್ಚಾಗಿ ಬಿಸಿ ನೀರನ್ನ ಕುಡಿಯಿರಿ. ರೋಗ ನಿರೋಧಕ ಶಕ್ತಿಯನ್ನ ಹೆಚ್ಚು ಮಾಡಿಕೊಳ್ಳುವ ಆಹಾರ ತಿನ್ನಿ ಇದರಿಂದ ರೋಗದಿಂದ ಬಚಾವ್ ಆಗಬಹುದು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್