Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಮಾನತಾಗಿದ್ದ 18 ಬಿಜೆಪಿ ಶಾಸಕರ ಆದೇಶ ಹಿಂಪಡೆಯಲು ನಿರ್ಧಾರ : ಕಾರಣವೇನು ಗೊತ್ತಾ..?

---Advertisement---

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ವಿಧಾನಸಭಾ ಅಧಿವೇಶನದಲ್ಲಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಅದನ್ನ ವಾಪಾಸ್ ಪಡೆಯುವುದಕ್ಕೆ ನಿರ್ಧಾರ ಮಾಡಲಾಗಿದೆ. ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸ್ಪೀಕರ್ ಖಾದರ್ ನೇತೃತ್ವದಲ್ಲಿ ನಡೆದ ಸಭೆಯ ಬಳಿಮ ಆರ್.ಅಶೋಕ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಶಾಸಕರ ಅಮಾನತು ಮಾಡಿರುವುದನ್ನು ವಾಪಾಸ್ ಪಡೆದು, ಸ್ಪೀಕರ್ ಅವರೇ ಅಧಿಕೃತವಾಗಿ‌ ಹೇಳಬೇಕು. ಕಳೆದ 15 ದಿನದಿಂದ ಅಮಾನತುಗೊಂಡ 18 ಶಾಸಕರ ಬಗ್ಗೆ ಸಭಾಧ್ಯಕ್ಷರ ಬಳಿ ಚರ್ಚೆ ಮಾಡುತ್ತಾ ಇದ್ದೆವು. ವಿಧಾ‌ಸಭೆಗೆ ಆಡಳಿತ ಪಕ್ಷ ಮಾತ್ರವಲ್ಲ, ವಿರೋಧ ಪಕ್ಷವೂ ಬಹಳ ಮುಖ್ಯ. ಈ ರೀತಿಯ ಘಟನೆ ಅನೇಕ ಬಾರಿ ನಡೆದಿದೆ‌‌. ಆರು ತಿಂಗಳು ಅಮಾನತು ಮಾಡುವುದು ಸರಿಯಲ್ಲ. ಇದೇ ರೀತಿ ಮುಂದುವರೆದರೆ ಅಧಿವೇಶನದಲ್ಲಿ ಆಡಳಿತ ಪಕ್ಷವೇ ಇರಬೇಕಾಗುತ್ತದೆ. ನಮ್ಮ ಶಾಸಕರು ವಿಷಾದ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಎಲ್ಲವೂ ಇಲ್ಲಿಗೆ ಮುಕ್ತಾಯವಾಗಬೇಕು ಎನ್ನುತ್ತಿದ್ದಾರೆ. ಯುಟಿ ಖಾದರ್ ಅವರು ನಾಳೆಯಿಂದ ಹಜ್ ಯಾತ್ರೆಗೆ ಹೋಗ್ತಾ ಇದ್ದಾರೆ. ಎಲ್ಲವೂ ಇಲ್ಲಿಗೆ ಮುಕ್ತಾಯವಾಗಬೇಕು ಎಂದಿದ್ದಾರೆ.

ವಿಧಾನಸಭೆ ಅಧಿವೇಶನ ನಡೆಯಬೇಕಾದರೆ ಅಶಿಸ್ತು ತೋರಿದ ಹಿನ್ನೆಲೆ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ಆರು ತಿಂಗಳುಗಳ ಕಾಲ ಯಾವುದೇ ಅಧಿವೇಶನಕ್ಕೂ ಬರುವಂತೆಯೇ ಇರಲಿಲ್ಲ. ಇದೀಗ ಅದಕ್ಕೊಂದು ಮುಕ್ತಾಯ ನೀಡುವ ನಿಟ್ಟಿನಲ್ಲಿ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ಸಭೆ ನಡೆದಿದೆ. ಆ ಬಗ್ಗೆ ಯುಟಿ ಖಾದರ್ ಅಧಿಕೃತವಾಗಿ ಘೋಷಿಸಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment