Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಶಿಷ್ಟ ಜಾತಿ ಒಳ ಮೀಸಲಾತಿ : ಸಮೀಕ್ಷಾ ಕಾರ್ಯ ಅವಧಿ ಮರು ವಿಸ್ತರಣೆ

---Advertisement---

 

ಚಿತ್ರದುರ್ಗ. ಮೇ27:  ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರ ರಚಿಸಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಂಬಂಧದ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸಂಗ್ರಹಣೆಗಾಗಿ ಜಿಲ್ಲೆಯಲ್ಲಿ ನಡೆದಿರುವ ಸಮೀಕ್ಷೆ ಕಾರ್ಯದ ಅವಧಿಯನ್ನು ಜೂನ್ 01 ರವರೆಗೆ ಮರು ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷೆ ಕಾರ್ಯ ಕಳೆದ ಮೇ 05 ರಿಂದ ಆರಂಭಗೊಂಡಿದ್ದು, ಕಾರ್ಯದರ್ಶಿಗಳು, ಏಕ ಸದಸ್ಯ ಆಯೋಗ, ಬೆಂಗಳೂರು ಅವರ ಆದೇಶದಂತೆ ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಕಾರ್ಯವನ್ನು ಮೇ29 ರವರೆಗೆ ಕೈಗೊಳ್ಳಲು ಮರು ವಿಸ್ತರಿಸಲಾಗಿದೆ.
ಪರಿಷ್ಕøತ ವೇಳಾಪಟ್ಟಿಯಂತೆ ಮೊದಲನೆ ಹಂತದಲ್ಲಿ ಮನೆ ಮನೆ ಭೇಟಿ ನೀಡಿ ಕೈಗೊಳ್ಳುವ ಸಮೀಕ್ಷಾ ಕಾರ್ಯವು ಮೇ. 29 ರವರೆಗೆ ಜರುಗಲಿದೆ.  ಎರಡನೆ ಹಂತದಲ್ಲಿ, ಸಮೀಕ್ಷೆ ಬ್ಲಾಕ್‍ಗಳಲ್ಲಿ ವಿಶೇಷ ಶಿಬಿರಗಳನ್ನು ಕೈಗೊಂಡು, ಮನೆ-ಮನೆ ಭೇಟಿ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ಜೂನ್ 01 ರವರೆಗೆ ಜರುಗಲಿದ್ದು, ಮೂರನೆ ಹಂತದಲ್ಲಿ ಸ್ವಯಂ ಘೋಷಣೆ ಮಾಡಿ, ಆನ್‍ಲೈನ್ ಮೂಲಕ ಸಮೀಕ್ಷೆ ಕಾರ್ಯವು ಕೂಡ ಜೂನ್ 01 ರವರೆಗೆ ಜರುಗಲಿದೆ.
ಪರಿಷ್ಕøತ ವೇಳಾಪಟ್ಟಿಯನ್ವಯ ಸಮೀಕ್ಷೆ ಸಂದರ್ಭದಲ್ಲಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ಕುಟುಂಬದ ಸಂಪೂರ್ಣ ಮಾಹಿತಿ ನೀಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...