Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಮೂರನೇ ದಿನಕ್ಕೆ ಕಾಲಿಟ್ಟ ಪೌರ ಕಾರ್ಮಿಕರ ಮುಷ್ಕರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 28 : ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಬುಧವಾರ ಮೂರನೆ ದಿನಕ್ಕೆ ಕಾಲಿಟ್ಟಿದೆ.

ಚಿತ್ರದುರ್ಗ ತಾಲ್ಲೂಕು ಪೌರ ನೌಕರರು ಹಾಗೂ ಪೌರ ಕಾರ್ಮಿಕರು ನಗರಸಭೆ ಮುಂಭಾಗದ ಗೇಟ್ ಬಂದ್ ಮಾಡಿ ರಸ್ತೆಯಲ್ಲಿಯೇ ಮುಷ್ಕರ ಆರಂಭಿಸಿದ್ದಾರೆ. ಹೊರ ಗುತ್ತಿಗೆ ಪದ್ದತಿಯನ್ನು ನಿಲ್ಲಿಸಿ ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ನೀರು ಸರಬರಾಜುದಾರರು ಹಾಗೂ ವಾಹನ ಚಾಲಕರುಗಳು ಜೀವನ ಭದ್ರತೆಯಿಲ್ಲದೆ ಅನೇಕ ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದು, ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಲ್ಲಿಯತನಕ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲವೆಂದು ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

 

ಪೌರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ರೇಣುಕ ಮಾತನಾಡಿ ಬೆಂಗಳೂರಿನ ಬಿ.ಬಿ.ಎಂ.ಪಿ.ಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖಾಯಂಗೊಳಿಸಿದ್ದು, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರನ್ನು ನಿರ್ಲಕ್ಷಿಸಿರುವುದು ಯಾವ ನ್ಯಾಯ? ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಸಿಗುತ್ತಿಲ್ಲ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಿದೆ. ಜ್ಯೋತಿ ಸಂಜೀವಿನಿ ಯೋಜನೆ ಪೌರ ಕಾರ್ಮಿಕರಿಗೆ ಸಿಗಬೇಕು. ಗುತ್ತಿಗೆ ಹೊರ ಗುತ್ತಿಗೆ ಬದಲು ನೇರ ಪಾವತಿಯಾಗಬೇಕೆಂದು ಒತ್ತಾಯಿಸಿದರು.

ವಾಲ್‍ಮನ್‍ಗಳು, ನೀರು ಸರಬರಾಜುದಾರರು, ಹೆಲ್ತ್‍ಇನ್ಸ್‍ಪೆಕ್ಟರ್‍ಗಳು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮುಷ್ಕರದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ಬೆಂಬಲ ಸೂಚಿಸಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಸಿ.ಹೆಚ್.ಮಂಜುನಾಥ್, ಜಗದೀಶ್ ಇನ್ನು ಅನೇಕರು ಪೌರ ಕಾರ್ಮಿಕರ ಜೊತೆ ಮುಷ್ಕರದಲ್ಲಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...