Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇರಲಿದೆ : ಶಾಲೆಗಳಿಗೂ ರಜೆ ಘೋಷಣೆ

---Advertisement---

ಬೆಂಗಳೂರು; ರಾಜ್ಯದಲ್ಲಿ ಅವಧಿಗೂ ಮುನ್ನವೇ ಜೋರು ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಭಾಗ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಹೆಚ್ಚಾಗಿದೆ. ಚಳಿ, ಗಾಳಿಯ ಜೊತೆಗೆ ಮಳೆಯೂ ಹೆಚ್ಚಾಗಿದೆ. ಇದರಿಂದ ಜನ ಹೊರಗೆ ಹೋಗುವುದಕ್ಕೂ ಹಿಂಸೆಯಾಗುತ್ತಿದೆ. ಕೆಲಸಕ್ಕೆಂದು ಹೋಗುವವರು, ಶಾಲೆಗೆಂದು ಹೋಗುವವರಿಗೆ ತಾಪತ್ರಯ ಉಂಟಾಗಿದೆ. ಹವಮಾನ ಇಲಾಖೆಯ ವರದಿಯ ಪ್ರಕಾರ ಮಳೆ ಹೀಗೆ ಮುಂದುವರೆಯಲಿದೆ ಎನ್ನಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಇಂದು ಮತ್ತು ನಾಳೆ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪ್ರವಾಹದ ಆತಂಕ ಮುಂದುವರೆದಿದ್ದು, ಜಿಲ್ಲಾಧಿಕಾರಿಗಳು ಈ ನಿರ್ಧಾರವನ್ನ ಕೈಗೊಂಡಿದ್ದಾರೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ಮಳೆಯ ಅಬ್ಬರ ಜೋರಾಗಿದ್ದು, ಪ್ರವಾಸಕ್ಕೆಂದು ಹೋಗುವವರಿಗೆ ಎಚ್ಚರಿಕೆಯ ಸಂದೇಶವನ್ನ ರವಾನಿಸಲಾಗಿದೆ. ಒಂದು ಕಡೆ ಮಳೆಯ ತುಂತುರು ಹನಿ, ಮತ್ತೊಂದು ಕಡೆ ಚುಮುಚುಮು ಚಳಿ. ಈ ಕ್ಲೈಮೇಟ್ ಗೆ ಪ್ರವಾಸ ಹೋಗುವವರ ಸಂಖ್ಯೆ ಜಾಸ್ತಿ. ಆದರೆ ಎಚ್ವರಿಕೆ ಬಹಳ ಮುಖ್ಯವಾಗಿರುತ್ತದೆ.

ಅತ್ತ ಮಳೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ದಾಳಿಂಬೆ ಬೆಳೆಗಾರರು ನಷ್ಟ ಅನುಭವಿಸಿದ್ದಾರೆ. ದಾಳಿಂಬೆ ಗಿಡಗಳು ಹೂಗಳು ಉದುರುತ್ತಿವೆ. ಬಸವಕಲ್ಯಾಣ ತಾಲೂಕಿನ ಲಾಡವಂತಿ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡು ಗ್ರಾಮಸ್ಥರು ಪರದಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಕಾರವಾರದಲ್ಲೂ ರೆಡ್ ಅಲರ್ಟ್ ಘೋಷಣೆಯಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಮಳೆ ಹೀಗೆ ಮುಂದುವರೆಯಲಿದ್ದು, ಜನ ಜಾಗೃತಿಯಿಂದ ಇರಬೇಕಾಗಿದೆ. ಹೊರಗೆ ಹೋಗುವವರು ಎಚ್ಚರಿಕೆಯಿಂದ ಇರಬೇಕಾಗಿರುತ್ತದೆ. ಸಿಡಿಲಿನಿಂದ ಕೂಡ ಜಾಗೃತಿಯಿಂದ ಇರಬೇಕಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment