Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಂದುವರಿದ ಪೌರ ಕಾರ್ಮಿಕರ ಮುಷ್ಕರ : ಸರ್ಕಾರದ ನಡೆಗೆ ಡಿ.ದುರುಗೇಶಪ್ಪ ಅಸಮಾಧಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 29 : ಸೇವೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪೌರ ಕಾರ್ಮಿಕರು ನಡೆಸುತ್ತಿರುವ ಮುಷ್ಕರ ಗುರುವಾರ ಮೂರನೆ ದಿನಕ್ಕೆ ಕಾಲಿಟ್ಟಿತು.

ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ನಂತರ ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ವಾಹನಗಳ ಸಂಚಾರ ಬಂದ್ ಆಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ.ದುರುಗೇಶಪ್ಪ ಪ್ರತಿನಿತ್ಯವೂ ಬೆಳಿಗ್ಗೆಯೇ ನಗರ ಸ್ವಚ್ಚತೆಯಲ್ಲಿ ತೊಡಗುವ ಪೌರ ಕಾರ್ಮಿಕರು ಒಂದು ದಿನ ಕೆಲಸ ಮಾಡದಿದ್ದರೆ ನಗರದಲ್ಲಿ ಎಂತಹ ಕ್ಲಿಷ್ಠಕರ ಪರಿಸ್ಥಿತಿ ನಿರ್ಮಾಣವಾಗಲಿದೆ ಎನ್ನುವುದನ್ನು ಊಹಿಸಿಕೊಳ್ಳಲು ಆಗುವುದಿಲ್ಲ. ಚರಂಡಿ ಸ್ವಚ್ಚಗೊಳಿಸುವುದರಿಂದ ಹಿಡಿದು ಶೌಚಾಲಯ ಗುಂಡಿಯನ್ನು ಶುಚಿಗೊಳಿಸುವವರು ಪೌರ ಕಾರ್ಮಿಕರು ಆದರೂ ಸರ್ಕಾರ ಕಡೆಗಣಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪೌರ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಹೊರ ಗುತ್ತಿಗೆ ರದ್ದುಪಡಿಸಿ ನೇರ ನೇಮಕಾತಿ ಮಾಡಿಕೊಳ್ಳಬೇಕು. ವಾಲ್‍ಮನ್‍ಗಳು, ನೀರಗಂಟಿಗಳು, ವಾಹನ ಚಾಲಕರು, ಪೌರ ಕಾರ್ಮಿಕರು ಜೀವನ ಭದ್ರತೆಯಿಲ್ಲದೆ ದುಡಿಯುತ್ತಿದ್ದಾರೆ. ಅದೇ ಒಬ್ಬ ಬಿಲ್ ಕಲೆಕ್ಟರ್ ಬಡ್ತಿ ಪಡೆದು ಮುಖ್ಯಾಧಿಕಾರಿಯಾಗಬಹುದು. ಪೌರ ಕಾರ್ಮಿಕರಿಗೆ ಯಾವ ಬಡ್ತಿಯೂ ಇಲ್ಲ. ಇದ್ಯಾವ ನ್ಯಾಯ ಎಂದು ಪ್ರಶ್ನಿಸಿದ ಡಿ.ದುರುಗೇಶಪ್ಪ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೌರ ಕಾರ್ಮಿಕರಿಗೂ ಕನಿಷ್ಟ ಗೌರವ ಕೊಡಬೇಕೆಂದು ಒತ್ತಾಯಿಸಿದರು.

ಪೌರ ಕಾರ್ಮಿಕರ ಮುಷ್ಕರದಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿ ಮಾತನಾಡಿದ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸ್ರುಲ್ಲಾ ರಾಜ್ಯ ಸರ್ಕಾರ ನಿರ್ಲಕ್ಷೆ ಮಾಡುವುದು ಬೇಡ. ಆದಷ್ಟು ಬೇಗನೆ ಪೌರ ಕಾರ್ಮಿಕರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕು. ಆರೋಗ್ಯ ಹದಗೆಡುವಂ ಕೆಲಸ ಮಾಡುವ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ ಸರ್ಕಾರದಿಂದ ವೇತನ ಕೊಡಬೇಕು. ಗುತ್ತಿಗೆ, ಹೊರ ಗುತ್ತಿಗೆ ಬೇಡ. ಮೂರು ದಿನಗಳಿಂದ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿರುವುದಕ್ಕೆ ನಗರದಲ್ಲಿ ಎಲ್ಲೆಂದರಲ್ಲಿ ಕಸದ ರಾಶಿಗಳು ಬಿದ್ದಿವೆ. ಸರ್ಕಾರ ಕೂಡಲೆ ಗಮನ ಕೊಡಬೇಕೆಂದು ಮನವಿ ಮಾಡಿದರು.

ನಗರ ಸ್ವಚ್ಚತೆಯಲ್ಲಿ ತೊಡಗುವ ಪೌರ ಕಾರ್ಮಿಕರಿಗೂ ಜ್ಯೋತಿ ಸಂಜೀವಿನಿ ಮತ್ತು ಆರೋಗ್ಯ ಸಂಜೀವಿನಿಯಂತ ಸ್ಕೀಂಗಳು ಸಿಗಬೇಕು. ಯಾವುದೆ ಕಾರಣಕ್ಕೂ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೌರ ಕಾರ್ಮಿಕರ ಮುಷ್ಕರವನ್ನು ಹಗುರವಾಗಿ ತೆಗೆದುಕೊಳ್ಳಬಾರದೆಂದು ಆಗ್ರಹಿಸಿದರು.

ನಗರಸಭೆ ಅಧ್ಯಕ್ಷೆ ಸುಮಿತ, ಪೌರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ರೇಣುಕ, ಜಿಲ್ಲಾಧ್ಯಕ್ಷ ಎಲ್.ಪಿ.ಲವ, ಪುಟ್ಟಪ್ಪ, ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ ಸೇರಿದಂತೆ ನೂರಾರು ಪೌರ ಕಾರ್ಮಿಕರು, ವಾಲ್‍ಮನ್‍ಗಳು,ನೀರು ಸರಬರಾಜುದಾರರು, ಚಾಲಕರು, ಹೆಲ್ತ್ ಇನ್ಸ್ಪೆಕ್ಟರ್ ಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...