Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಲಾ ಪ್ರಾರಂಭೋತ್ಸವ : ಮಕ್ಕಳಿಗೆ ಬಲೂನ್, ಗುಲಾಬಿ ಹೂವು ನೀಡಿ ಸ್ವಾಗತ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 7899864552

ಸುದ್ದಿಒನ್, ಚಿತ್ರದುರ್ಗ, ಮೇ. 29 : ಒಂದರಿಂದ ಹತ್ತನೇ ತರಗತಿ ಶಾಲೆಗಳು ಗುರುವಾರದಿಂದ ಆರಂಭಗೊಂಡಿದ್ದು, ಎಲ್ಲೆಡೆ ಶಾಲೆಗಳಿಗೆ ತಳಿರು ತೋರಣಗಳನ್ನು ಕಟ್ಟಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು.

ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೈಯದ್ ಇಸ್ಮಾಯಿಲ್ ಮಕ್ಕಳಿಗೆ ಬಲೂನ್ ಹಾಗೂ ಗುಲಾಬಿ ಹೂಗಳನ್ನು ನೀಡಿ ಶಾಲೆಗೆ ಬರಮಾಡಿಕೊಂಡು ಮಾತನಾಡುತ್ತ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್ ಗಳನ್ನು ನೀಡಲಾಗುತ್ತಿದೆ. ಅದೇ ರೀತಿಯ ಉರ್ದು ಶಾಲೆಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಬೇಕಾಗಿರುವುದರಿಂದ ಸರ್ಕಾರ ಮುತುವರ್ಜಿ ವಹಿಸಿ ಬಲವರ್ಧನೆಗೊಳಿಸಬೇಕೆಂದು ಮನವಿ ಮಾಡಿದರು. ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಮಯ್ಯಭಾನು, ಶಿಕ್ಷಕಿಯರುಗಳಾದ ಲತಾ, ಉಮ, ಫಾತಿಮ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment