ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರೆಹಮಾನ್ ಹತ್ಯೆಯ ಬಳಿಕ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಈ ಸಂಬಂಧ ಮುಸ್ಲಿಂ ಮುಖಂಡರ ಸಭೆಯು ನಡೆದಿದೆ. ಈ ಸಭೆಯನ್ನ ಅರ್ಧಕ್ಕೆ ನಿಲ್ಲಿಸಿ, ದೊಡ್ಡ ಗಲಾಟೆಯೂ ನಡೆದಿದೆ. ಇದೀಗ ಮತ್ತೊಂದು ದೊಡ್ಡ ಬೆಳವಣಿಗೆ ಅಂದ್ರೆ ಅದು ಸಿದ್ದರಾಮಯ್ಯ ಅವರ ನಡೆ ವಿಚಾರ.
ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರು ಬಿಕೆ ಹರಿಪ್ರಸಾದ್ ಅವರ ಮನೆಗೆ ಹೋಗಿದ್ದರು. ಈ ಬಿಕೆ ಹರಿಪ್ರಸಾದ್ ನೇರಾ ನೇರಾ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈಗ ನೋಡಿದ್ರೆ ಇಬ್ಬರು ದೋಸ್ತಿಗಳಾಗಿದ್ದಾರೆ. ಬೆಳಗ್ಗೆನೆ ಸಿಎಂ ಸಿದ್ದರಾಮಯ್ಯ ಅವರೇ ಬಿಕೆ ಹರಿಪ್ರಸಾದ್ ಅವರ ನಿವಾಸಕ್ಕೆ ಹೋಗಿ ಭೇಟಿಯಾಗಿದ್ದಾರೆ. ಮೂಲಗಳ ಪ್ರಕಾರ ಈ ಭೇಟಿಯ ಹಿಂದೊಂದು ಕಾರಣವಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರೆಲ್ಲ ಸಾಮೂಹಿಕವಾಗಿ ರಾಜೀನಾಮೆ ನೀಡ್ತೇವೆ ಎಂದು ಕೂತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು. ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ. ಬಿಕೆ ಹರಿಪ್ರಸಾದ್ ಅವರಿಗೆ ಮಂಗಳೂರಿಗೆ ಹೋಗಿ ಬನ್ನಿ ಎಂದಿದ್ದೇನೆ. ಅಲ್ಲಿನ ಪರಿಸ್ಥಿತಿ ಬಗ್ಗೆ ಅವಲೋಕಿಸಿ ಬನ್ನಿ ಎಂದಿದ್ದೇನೆ. ಕೋಮು ಗಲಭೆಗಳನ್ನು ಉಂಟು ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು.ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.





















